Tuesday, May 7, 2024
spot_imgspot_img
spot_imgspot_img

ಜೂನ್ 15ರಿಂದ 2021-22ನೇ ಸಾಲಿನ ಪ್ರೌಢಶಾಲೆಗಳ 8, 9 ಮತ್ತು 10ನೇ ತರಗತಿಗಳ ಶೈಕ್ಷಣಿಕ ವರ್ಷ ಪ್ರಾರಂಭ: ಸಾರ್ವಜನಿಕ ಶಿಕ್ಷಣ ಇಲಾಖೆ

- Advertisement -G L Acharya panikkar
- Advertisement -

ಬೆಂಗಳೂರು: ಲಾಕ್‌ಡೌನ್ ಜೂ.7ರ ವರೆಗೂ ವಿಸ್ತರಿಸಿರುವ ಹಿನ್ನೆಲೆಯಲ್ಲಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೂನ್ 14ರ ವರೆಗೆ ನೀಡಿದ್ದು, ಜೂ.15ರಿಂದ 2021-22ನೇ ಸಾಲಿನ ಪ್ರೌಢಶಾಲೆಗಳ 8, 9 ಮತ್ತು 10ನೇ ತರಗತಿಗಳ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ.

ಈ ವೇಳಾಪಟ್ಟಿಯು ತಾತ್ಕಾಲಿಕವಾಗಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಪರಿಷ್ಕರಣೆಗೆ ಒಳಪಟ್ಟಿದೆ. ಕಾಲಕಾಲಕ್ಕೆ ಸರ್ಕಾರ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಗಳನ್ನು ಆಯಾ ಶಾಲೆಗಳು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಆದೇಶಿಸಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆ ನಿಗದಿಪಡಿಸಿದ ಬೇಸಿಗೆ ರಜಾ ದಿನಗಳಲ್ಲಿ ಯಾವುದೇ ಬದಲಾವಣೆ ಇಲ್ಲ.
ಪ್ರೌಢಶಾಲೆಗಳಿಗೆ ಜೂ.14ರ ವರೆಗೆ ಬೇಸಿಗೆ ರಜೆ ವಿಸ್ತರಿಸಲಾಗಿದೆ. ಆದರೆ ಕೋವಿಡ್-19ರ ಹಿನ್ನಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ದಿನಾಂಕ 07-06-2021ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಿ, ಆದೇಶಿಸಲಾಗಿದೆ. ಈ ಅಂಶಗಳ ಹಿನ್ನಲೆಯಲ್ಲಿ ಶಾಲೆಗಳಿಗೆ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಈ ಹಿಂದೆ ನಿಗದಿ ಪಡಿಸಿರುವುದನ್ನು ಮಾರ್ಪಡಿಸಿ, ಈ ಕೆಳಗಿನಂತೆ ಮರುನಿಗದಿ ಪಡಿಸಲಾಗಿದೆ. 2020-21ನೇ ಸಾಲಿನ ಬೇಸಿಗೆ ರಜೆ ಹಾಗೂ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ಪರಿಷ್ಕೃತ ವೇಳಾಪಟ್ಟಿ ಪ್ರಾಥಮಿಕ ಶಾಲೆಗಳಿಗೆ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರೌಢ ಶಾಲೆಗಳಿಗೆ ದಿನಾಂಕ 14-06-2021ರವರೆಗೆ ಬೇಸಿಗೆ ರಜೆಯನ್ನು ವಿಸ್ತರಿಸಿದೆ.

ರಜಾ ಅವಧಿಯಲ್ಲಿ 2020-21ನೇ ಸಾಲಿನ 10ನೇ ತರಗತಿ (ಎಸ್ ಎಸ್ ಎಲ್ ಸಿ) ವಿದ್ಯಾರ್ಥಿಗಳೊಂದಿಗೆ ಸಂಬಂಧಿಸಿದ ಶಿಕ್ಷಕರು ಕಲಿಕಾ ವಿಷಯಕ್ಕೆ ಸಂಬಂಧಿಸಿದಂತೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು, ವಿದ್ಯಾರ್ಥಿಗಳ ಕ್ಷಿಷ್ಟಾಂಶಗಳನ್ನು ದೂರವಾಣಿ, ಆನ್ ಲೈನ್ ಮೂಲಕ ಪರಿಹರಿಸುವುದು ಹಾಗೂ ಮಾರ್ಗದರ್ಶನ ನೀಡುವುದು. ದಿನಾಂಕ 15-06-2021 ರಿಂದ 2021-22ನೇ ಸಾಲಿನ ಪ್ರೌಢ ಶಾಲೆಗಳ 8, 9 ಮತ್ತು 10ನೇ ತರಗತಿಗಳ ಶೈಕ್ಷಣಿಕ ವರ್ಷ ಪ್ರಾರಂಭ.

  • ವಿಶೇಷ ಸೂಚನೆಗಳು
  • ಈ ಮೇಲ್ಕಂಡ ವೇಳಾಪಟ್ಟಿಯು ತಾತ್ಕಾಲಿಕವಾಗಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಪರಿಷ್ಕೃರಣೆಗೆ ಒಳಪಟ್ಟಿರುತ್ತದೆ.
  • ಕೋವಿಡ್-19ರ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.
  • ಈ ಮೇಲಿನಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2020-21ನೇ ಸಾಲಿನ ಬೇಸಿಗೆ ರಜೆ ಹಾಗೂ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ಪರಿಷ್ಕೃತ ವೇಳಾಪಟ್ಟಿ ಪರಿಷ್ಕರಿಸಲಾಗಿದೆ.
  • ಆದರೆ ಕೋವಿಡ್ ಅಬ್ಬರ ನಡುವೆ ಈ ಶೈಕ್ಷಣಿಕ ವರ್ಷಾರಂಭದ ವೇಳಾಪಟ್ಟಿಯಂತೆ ಶಾಲಾ-ಕಾಲೇಜು ಆರಂಭವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ

- Advertisement -

Related news

error: Content is protected !!