Tuesday, April 30, 2024
spot_imgspot_img
spot_imgspot_img

ಜ್ಯೂನಿಯರ್ ಆರ್ಟಿಸ್ಟ್ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

- Advertisement -G L Acharya panikkar
- Advertisement -

ಬೆಂಗಳೂರು : ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಜ್ಯೂನಿಯರ್ ಆರ್ಟಿಸ್ಟ್ ಒಬ್ಬರು ಬಲಿಯಾದ ಪ್ರಕರಣ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ. ಹದಿನೈದರ ವಯಸ್ಸಿನ ಸಿಂಚನಾ ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರು ವಾಂತಿ ಬೇಧಿಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಮನೆಯ ಸಮೀಪದ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು.

ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಸಿಂಚನಾ ತಾಯಿ ನೇತ್ರಾವತಿ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಎರಡು ದಿನಗಳಿಂದ ನನ್ನ ಮಗಳು ವಾಂತಿ ಬೇಧಿಯಿಂದ ಬಳಲುತ್ತಿದ್ದಳು. ಮೊದಲು ಕ್ಲಿನಿಕ್ ನಲ್ಲಿ ತೋರಿಸಿದ್ದೆವು. ತುಂಬಾ ಸುಸ್ತಾಗಿದ್ದರಿಂದ ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸಲಹೆ ನೀಡಿದರು. ಮನೆಯ ಸಮೀಪದಲ್ಲೇ ಇದ್ದ ಖಾಸಗಿ ಆಸ್ಪತ್ರೆಗೆ ಮಗಳನ್ನು ದಾಖಲಿಸಲಾಯಿತು. ಆದರೆ, ಅವಳಿಗೆ ಸರಿಯಾದ ವೇಳೆಗೆ ಚಿಕಿತ್ಸೆ ದೊರೆಯಲಿಲ್ಲ . ಇದೇ ನನ್ನ ಮಗಳ ಸಾವಿಗೆ ಕಾರಣವಾಗಿದೆ.

ಸಿಂಚನಾಗೆ ಕತ್ತಿನ ಭಾಗಕ್ಕೆ ಇಂಜೆಕ್ಷನ್ ನೀಡಿದ್ದರು. ಕತ್ತಿನಲ್ಲಿ ರಕ್ತಸ್ರಾವ ಹೆಚ್ಚಾಯಿತು. ಅದನ್ನು ವೈದ್ಯರ ಗಮನಕ್ಕೆ ತಂದರೂ, ಅವರು ಅದನ್ನು ಗಂಭೀರವಾಗಿ ತಗೆದುಕೊಳ್ಳಲಿಲ್ಲ. ತರಬೇತಿ ವೈದ್ಯರು ನನ್ನ ಮಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ನುರಿತ ವೈದ್ಯರನ್ನು ಕರೆಯಿಸುವಂತೆ ಬೇಡಿಕೊಂಡರೂ, ಅವರು ಕೇಳಲಿಲ್ಲ . ಹಾಗಾಗಿ ನನ್ನ ಮಗಳನ್ನು ಕಳೆದುಕೊಳ್ಳಬೇಕಾಯಿತು’ ಎಂದು ಆರೋಪಿಸಿದ್ದಾರೆ.

ಈ ಸಾವಿನ ಕುರಿತಂತೆ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು , ಪೊಲೀಸರು ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರು ಆಶ್ವಾಸನೆ ನೀಡಿದ್ದಾರೆ.

- Advertisement -

Related news

error: Content is protected !!