Wednesday, April 24, 2024
spot_imgspot_img
spot_imgspot_img

ಟಾಲಿವುಡ್ ಗೆ ಎಂಟ್ರಿ ಕೊಟ್ಟ ದುನಿಯಾ ವಿಜಯ್​; ನಂದಮೂರಿ ಬಾಲಕೃಷ್ಣ ಚಿತ್ರದಲ್ಲಿ ಬಂಪರ್​ ಚಾನ್ಸ್​

- Advertisement -G L Acharya panikkar
- Advertisement -

ಕನ್ನಡದ ಖ್ಯಾತ ನಟ ದುನಿಯಾ ವಿಜಯ್​ ಅವರು ಟಾಲಿವುಡ್​ ಅಂಗಳಕ್ಕೆ ಕಾಲಿಡುತ್ತಿದ್ದಾರೆ. ‘ಸಲಗ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅವರಿಗೆ ಈಗ ಬಂಪರ್​ ಚಾನ್ಸ್​ ಸಿಕ್ಕಿದೆ.

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್​ ನಟಿಸಲಿದ್ದಾರೆ. ಈ ಬಗ್ಗೆ ಹಲವು ದಿನಗಳ ಹಿಂದೆಯೇ ಸುದ್ದಿ ಕೇಳಿಬಂದಿತ್ತು. ಆದರೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ದುನಿಯಾ ವಿಜಯ್​ಗೆ ಸ್ವಾಗತ ಕೋರಿ, ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಅನೌನ್ಸ್​ ಮಾಡಲಾಗಿದೆ.

vtv vitla

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

‘ಸಲಗ’ ಸಿನಿಮಾದಿಂದ ದುನಿಯಾ ವಿಜಯ್​ ಅವರಿಗೆ ಚಿತ್ರರಂಗದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಆರಂಭ ಆಗಿದೆ ಎಂದರೂ ತಪ್ಪಿಲ್ಲ. ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಅವರು ಭಾರಿ ಜನಮೆಚ್ಚುಗೆ ಪಡೆದುಕೊಂಡರು. ಎಲ್ಲ ಕಡೆಗಳಲ್ಲೂ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿತು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!