Friday, August 28, 2026
spot_imgspot_img
spot_imgspot_img

ಟಿಪ್ಪು ಎಕ್ಸ್ ಪ್ರೆಸ್ ರೈಲು ಇನ್ನು ಒಡೆಯರ್ ಎಕ್ಸ್ ಪ್ರೆಸ್, ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಕುವೆಂಪು ಹೆಸರು

- Advertisement -
- Advertisement -

ಬೆಂಗಳೂರು: ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು, ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ ಎಂದು ಮರು ನಾಮಕರಣ ಮಾಡಿರುವುದಾಗಿ ರೈಲ್ವೆ ಮಂಡಳಿ ಉಪ ನಿರ್ದೇಶಕ ರಾಜೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಅವರಿಂದು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ ಅವರು, ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ ಪ್ರೆಸ್” ನಿಮಗೆ ಸೇವೆ ನೀಡಲಿದೆ. ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ ಪ್ರೆಸ್” ಆಗಲಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!