Friday, May 10, 2024
spot_imgspot_img
spot_imgspot_img

ಡಿನೋಟಿಫಿಕೇಷನ್ ಪ್ರಕರಣ: ಏ.19ರಂದು ಬಿಎಸ್‌ವೈ ವಿಚಾರಣೆಗೆ ಖುದ್ದು ಹಾಜರಾಗಲು ಕೋರ್ಟ್ ಸೂಚನೆ

- Advertisement -G L Acharya panikkar
- Advertisement -

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಏಪ್ರಿಲ್ 19ರಂದು‌ ವಿಚಾರಣೆಗೆ ಖುದ್ದು ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಶನಿವಾರ ಕೋರ್ಟ್ ಸಮನ್ಸ್‌ ಜಾರಿ‌ ಮಾಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಸಮನ್ಸ್ ಜಾರಿ‌ ಮಾಡಿದೆ. ಮಾಹಿತಿ ತಂತ್ರಜ್ಞಾನ (ಐ.ಟಿ) ಕಾರಿಡಾರ್‌ ನಿರ್ಮಾಣಕ್ಕಾಗಿ ನಗರದ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

vtv vitla
vtv vitla

ವಾಸುದೇವ ರೆಡ್ಡಿ ಎಂಬುವರು 2013ರಲ್ಲಿ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿರುವ ವಿಶೇಷ ನ್ಯಾಯಾಲಯ, ಏ.19ರಿಂದ ಯಡಿಯೂರಪ್ಪ ಅವರನ್ನು ವಿಚಾರಣೆಗೊಳಪಡಿಸಲು ನಿರ್ಧರಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್‌ 13(1)(ಡಿ) ಮತ್ತು 13(2)ರ ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಸಮನ್ಸ್‌ ಜಾರಿ ಮಾಡುವಂತೆ ನ್ಯಾಯಾಧೀಶರಾದ ಬಿ. ಜಯಂತ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಯಡಿಯೂರಪ್ಪ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ’ ಎಂದು ಲೋಕಾಯುಕ್ತ ಪೊಲೀಸರು ಎರಡು ಬಾರಿ ‘ಬಿ’ ವರದಿ ಸಲ್ಲಿಸಿದ್ದರು. ಎರಡೂ ವರದಿಗಳನ್ನು ತಿರಸ್ಕರಿಸಿದ್ದ ನ್ಯಾಯಾಲಯ, ನೇರವಾಗಿ ವಿಚಾರಣೆ ಆರಂಭಿಸುವ ತೀರ್ಮಾನ ಪ್ರಕಟಿಸಿತ್ತು.

vtv vitla
vtv vitla
- Advertisement -

Related news

error: Content is protected !!