- Advertisement -
- Advertisement -

ಬೆಂಗಳೂರು: ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವೀರಣ್ಣಪಾಳ್ಯದ ನಿವಾಸಿ ಸಂಗೀತಾ(26) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಮಂಡ್ಯ ಮೂಲದ ಸಂಗೀತಾ ಕಳೆದ ಒಂದೂವರೆ ವರ್ಷದ ಹಿಂದೆ ನೆಲಮಂಗಲ ಮೂಲದ ವಿನಯ್ ನನ್ನು ಪ್ರೀತಿಸಿ ಮದುವೆಯಾಗಿದ್ದರು.
ಬಳಿಕ ಕುಟುಂಬದಲ್ಲಿ ಬಿರುಕು ಉಂಟಾಗಿತ್ತು. ದಂಪತಿ ಇಬ್ಬರೂ ಬಹುರಾಷ್ಟ್ರೀಯ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಮಗುವಾಗಿಲ್ಲ ಎಂಬ ವಿಚಾರವಾಗಿ ಗಂಡ ವಿನಯ್ ಈಕೆಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ಸಂಗೀತಾ ಡೆತ್ ನೋಟ್ ಬರೆದಿಟ್ಟು, ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



- Advertisement -