- Advertisement -
- Advertisement -


ಬೆಂಗಳೂರು: ಚಂದನವನವನ್ನೇ ಬೆಚ್ಚಿಬೀಳಿಸಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್ಎಸ್ಎಲ್ ವರದಿ ಬಂದಿದ್ದು, ಅದರಲ್ಲಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಡ್ರಗ್ಸ್ ಸೇವಿಸಿರುವುದು ಖಚಿತವಾಗಿದೆ.
ಈ ಹಿಂದೆ ಈರ್ವರು ನಟಿಯರೂ ಕೂಡಾ ತಾವು ಯಾವುದೇ ತಪ್ಪು ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದರು. ಈಗ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಈ ಹಿನ್ನೆಲೆ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಮಾಧ್ಯಮದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ನಟಿ ಸಂಜನಾ ತಾಯಿ ರೇಷ್ಮಾ ಗಲ್ರಾನಿ, ಸಂಜನಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದಿದ್ದಾರೆ. ಈ ನಡುವೆ ನಟಿ ರಾಗಿಣಿ ದ್ವಿವೇದಿ, ಸತತವಾಗಿ ವಕೀಲರ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -








