Friday, April 26, 2024
spot_imgspot_img
spot_imgspot_img

ತಂದೆಯಿಂದಲೇ ಮಗನ ಚಿತೆಗೆ ಅಗ್ನಿಸ್ಪರ್ಶ

- Advertisement -G L Acharya panikkar
- Advertisement -

ಬೆಳ್ಳಾರೆ: ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾದ ಬಿಜೆಪಿ ಮುಖಂಡನ ಅಂತ್ಯಸಂಸ್ಕಾರ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತು.

ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು.

ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರವೀಣ್ ಪತ್ನಿ, ತಂದೆ- ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು.

ಅಂತಿಮ ನಮನಕ್ಕೆ ಜನಪ್ರತಿನಿಧಿಗಳು, ನಾಯಕರು ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!