Wednesday, July 2, 2025
spot_imgspot_img
spot_imgspot_img

ತಕ್ಷಣ ಉಕ್ರೇನ್ ತೊರೆಯುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರಿ ಕಚೇರಿ ಮನವಿ

- Advertisement -
- Advertisement -

ಕೈವ್‌: ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುದ್ಧ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಸ್ವದೇಶಕ್ಕೆ ಮರಳುವಂತೆ ಕೈವ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಮನವಿ ಮಾಡಿದೆ.

ಭಾರತೀಯ ರಾಯಭಾರಿ ಕಚೇರಿಯು ವೈದ್ಯಕೀಯ ವಿಶ್ವವಿದ್ಯಾಲಯಗಳಿಂದ ಆನ್‌ಲೈನ್ ತರಗತಿಗಳ ದೃಢೀಕರಣದ ಕುರಿತು ಹೆಚ್ಚಿನ ಕರೆಗಳನ್ನು ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯಗಳಿಂದ ಆನ್‌ಲೈನ್ ತರಗತಿಗಳ ದೃಢೀಕರಣಕ್ಕೆ ಕಾಯುವ ಬದಲು ಸ್ವದೇಶಕ್ಕೆ ಮರಳುವಂತೆ ಭಾರತೀಯ ರಾಯಭಾರಿ ಕಚೇರಿಯು ಹೇಳಿದೆ.

ಫೆಬ್ರವರಿ 20 ರಂದು ನೀಡಿದ ಸಲಹೆಯಲ್ಲಿ ಉಳಿದುಕೊಳ್ಳುವುದು ಅನಿವಾರ್ಯವಲ್ಲದ ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಎಲ್ಲಾ ಭಾರತೀಯ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಸೂಚಿಸಲಾಗಿತ್ತು.

ಉಕ್ರೇನ್‌ನ ಎರಡು ಪ್ರಾಂತ್ಯಗಳನ್ನು ಸ್ವತಂತ್ರ ರಾಷ್ಟ್ರಗಳೆಂದು ರಷ್ಯಾ ಘೋಷಿಸಿದ ನಂತರ ಎರಡೂ ರಾಷ್ಟ್ರಗಳ ಮಧ್ಯೆದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಉಕ್ರೇನ್ ಮತ್ತು ಅದರ ಗಡಿ ಪ್ರದೇಶಗಳಲ್ಲಿ 20 ಸಾವಿರಕ್ಕೂ ಹೆಚ್ಚು ಭಾರತೀಯರು ವಾಸಿಸುತ್ತಿದ್ದಾರೆ. ಅವರನ್ನು ಸ್ವದೇಶಕ್ಕೆ ಮರಳಿ ಕರೆತರಲು ಭಾರತ ಸರ್ಕಾರ ಪ್ರಯತ್ನಿಸುತ್ತಿದೆ. ಇಂದು ಬೆಳಗ್ಗೆ ಏರ್ ಇಂಡಿಯಾದ ವಿಶೇಷ ವಿಮಾನವನ್ನು ಉಕ್ರೇನ್‌ಗೆ ಕಳುಹಿಸಲಾಗಿದೆ. ಉಕ್ರೇನ್‌ನ ಖಾರ್ಕಿವ್‌ನಿಂದ 256 ಭಾರತೀಯ ವಿದ್ಯಾರ್ಥಿಗಳು ಇಂದು ದೇಶಕ್ಕೆ ಮರಳಲಿದ್ದಾರೆ.

ಏರ್ ಇಂಡಿಯಾ ಫ್ಲೈಟ್ ಡ್ರೀಮ್‌ಲೈನರ್ B-787 ಮೂಲಕ ಇಂದು ರಾತ್ರಿ 10.15ಕ್ಕೆ ಭಾರತೀಯ ವಿದ್ಯಾರ್ಥಿಗಳು ದೇಶಕ್ಕೆ ವಾಪಸ್ ಆಗಲಿದ್ದಾರೆ. ಇದು 200 ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೇ ಇನ್ನೂ 4 ವಿಮಾನಗಳು ಕಾರ್ಯನಿರ್ವಹಿಸಲಿವೆ. ಭಾರತದ ರಾಯಭಾರ ಕಚೇರಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೀವ್‌ನಿಂದ ದೆಹಲಿಗೆ 4 ವಿಮಾನಗಳು ಫೆಬ್ರವರಿ 25, ಫೆಬ್ರವರಿ 27 ಮತ್ತು ಮಾರ್ಚ್ 6, 2022 ರಂದು ಕಾರ್ಯನಿರ್ವಹಿಸಲಿವೆ ಎಂದು ಹೇಳಿದೆ.

- Advertisement -

Related news

error: Content is protected !!