- Advertisement -
- Advertisement -
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರನ್ನು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಕರಾವಳಿಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.

ನಂತರದ ಬೆಳವಣಿಗೆಗಳಲ್ಲಿ ಪೊಲೀಸ್ ಇಲಾಖೆ ತೊರೆದು, ರಾಜಕೀಯ ಪ್ರವೇಶಿಸಿದ್ದರು. ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

ಇದೀಗ ಅಣ್ಣಾಮಲೈ ಅವರನ್ನು ಬಿಜೆಪಿ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.


- Advertisement -