Thursday, May 2, 2024
spot_imgspot_img
spot_imgspot_img

ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್‌‌ನಿಂದ ತಡೆಯಾಜ್ಞೆ ತಂದ ಕರಾವಳಿಯ ಮತ್ತೊಬ್ಬ ಶಾಸಕ..!!

- Advertisement -G L Acharya panikkar
- Advertisement -
vtv vitla

ಮಂಗಳೂರು: ಕರಾವಳಿಯ ಬಿಜೆಪಿ ಮುಖಂಡರು, ಶಾಸಕರು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ಮನವಿ ಸಲ್ಲಿಸಿರುವ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕರಾವಳಿಯ ಬಿಜೆಪಿ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೋರ್ಟ್‌‌ನಲ್ಲಿ ಈ ವಿಚಾರವಾಗಿ ತಡೆಯಾಜ್ಞೆ ತಂದಿದ್ದಾರೆ.

ಮುಲ್ಕಿ ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಬಳಿಕ ಇದೀಗ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೋರ್ಟಿನಿಂದ ತನ್ನ ವಿರುದ್ದ ಮಾನ ಹಾನಿಕಾರದ ವರದಿ , ಚಿತ್ರ , ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದು ಸುದ್ದಿ ಮಾಡಿದ್ದಾರೆ.

ವೇದವ್ಯಾಸ್ ಕಾಮತ್ ರವರು ಮಂಗಳೂರು ದಕ್ಷಿಣ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಒಂದು ವರ್ಷ ಸೇವೆ ಸಲ್ಲಿಸಿದ್ದರು. 2018ರಲ್ಲಿ ದಾಖಲೆಯ 86,545 ಮತಗಳನ್ನು ಪಡೆದು ಜೆ ಆರ್‌ ಲೊಬೋ ಅವರನ್ನು ಸೋಲಿಸಿ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು.

ವಿಧಾನಸಭೆಗೆ ಬಿಜೆಪಿ ಪಕ್ಷದಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು, ಸತತ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಈ ನಡುವೆ ತಮ್ಮ ವಿರುದ್ಧ ಮಾಧ್ಯಮಗಳು ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

- Advertisement -

Related news

error: Content is protected !!