Friday, April 19, 2024
spot_imgspot_img
spot_imgspot_img

ತಾಂಜಾನಿಯಾದಿಂದ ಬಂದಿದ್ದ ದೆಹಲಿ ವ್ಯಕ್ತಿಗೆ ಒಮಿಕ್ರಾನ್ – ಭಾರತದಲ್ಲಿ ಐದನೇ ಪ್ರಕರಣ

- Advertisement -G L Acharya panikkar
- Advertisement -

vtv vitla

ಭಾರತದಲ್ಲಿ ಒಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಮೊದಲನೇ ಒಮಿಕ್ರಾನ್​ ಪ್ರಕರಣ ಕಾಣಿಸಿಕೊಂಡಿದೆ. ತಾಂಜಾನಿಯಾದಿಂದ ದೆಹಲಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊವೀಡ್ ರೂಪಾಂತರಿ ಒಮಿಕ್ರಾನ್‌ ಸೋಂಕು ದೃಢವಾಗಿದ್ದು, ಲೋಕನಾಯಕ ಜೈ ಪ್ರಕಾಶ್ ಆಸ್ಪತ್ರೆಗೆ (ಎಲ್‌ಎನ್‌ಜೆಪಿ) ಅವರನ್ನು ದಾಖಲಿಸಲಾಗಿದೆ.

ಭಾರತದಲ್ಲಿ ಓಮಿಕ್ರಾನ್‌ನ ಮೊದಲ ಎರಡು ಪ್ರಕರಣಗಳು ಈ ವಾರದ ಆರಂಭದಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಮತ್ತೆಯಾಗಿತ್ತು. ಉಳಿದ ಎರಡು ಪ್ರಕರಣಗಳು ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪತ್ತೆಯಾಗಿತ್ತು.

“ಇನ್ನೂ 17 ಮಂದಿಯಲ್ಲಿ ಕೊವಿಡ್​ 19 ಸೋಂಕು ಕಾಣಿಸಿಕೊಂಡಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರೋಗಿಯ ಪ್ರಯಾಣದ ಇತಿಹಾಸವನ್ನು ಒಟ್ಟುಗೂಡಿಸಲಾಗುತ್ತಿದೆ ಮತ್ತು ಸಂಪರ್ಕಗಳನ್ನು ಪತ್ತೆಹಚ್ಚಲಾಗುತ್ತಿದೆ” ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ಮಾಹಿತಿ ನೀಡಿದ್ದಾರೆ.

ನವೆಂಬರ್ 25 ರಂದು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್​ ಈಗಾಗಲೇ 30ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಮುನ್ನೆಚ್ಚರಿಕೆ ವಹಿಸಿದೆ. ಈ ಸೋಂಕು ಅಷ್ಟೊಂದು ಮಾರಣಾಂತಿಕವಲ್ಲದೆ ಇದ್ದರೂ, ಮೂರನೇ ಅಲೆ ಉಂಟು ಮಾಡುವಷ್ಟು ಪ್ರಸರಣ ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

vtv vitla
- Advertisement -

Related news

error: Content is protected !!