Thursday, April 25, 2024
spot_imgspot_img
spot_imgspot_img

ತಾಯಿಯನ್ನು ಕರಾಟೆ ಬೆಲ್ಟ್​​ನಿಂದ ಹಿಸುಕಿ ಕೊಂದ ಪಾಪಿ ಪುತ್ರಿ!

- Advertisement -G L Acharya panikkar
- Advertisement -

ಮುಂಬೈ: 15ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕುತ್ತಿಗೆಯನ್ನು ಕರಾಟೆ ಬೆಲ್ಟ್​​ನಿಂದ ಹಿಸುಕಿ ಕೊಂದ ಘಟನೆ ನವ ಮುಂಬೈನಲ್ಲಿ ನಡೆದಿದೆ.

ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂಬ ಆಸೆಯಿತ್ತು. ಆದರೆ ಮಗಳಿಗೆ ಅದು ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಇದೇ ವಿಚಾರಕ್ಕೆ ಕಳೆದ ತಿಂಗಳು ಅಮ್ಮನ ವಿರುದ್ಧ ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳಿಸಿದ್ದರು.

ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು. ಅದರಲ್ಲಿ ಮಹಿಳೆ ಸಹಜವಾಗಿ ಸತ್ತಿಲ್ಲ..ಆಕೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು.

ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್​​ನಿಂದ ಕತ್ತು ಹಿಸುಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

driving

- Advertisement -

Related news

error: Content is protected !!