Monday, September 14, 2026
spot_imgspot_img
spot_imgspot_img

ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ

- Advertisement -
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ದ. ಕ .ಜಿ .ಪ .ಉ. ಹಿರಿಯ ಪ್ರಾಥಮಿಕ ಶಾಲೆ, ಪಾಂಡವರ ಕಲ್ಲು ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ತಂಡವು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಎಂಟನೇ ತರಗತಿಯ 14ರ ವಯೋಮಾನ ವಿಭಾಗದ ಆಯ್ಕೆ ಪ್ರಕ್ರಿಯೆಯಲ್ಲಿ ಹರ್ಷಿತ್ ಡಿ.ಕೆ ಮತ್ತು ತನ್ವಿತ್ ಸಿ.ಜಿ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಈ ತಂಡವನ್ನು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ವಿಶಾಲಾಕ್ಷಿ ಹೆಚ್.ಆಳ್ವ ತರಬೇತುಗೊಳಿಸಿರುತ್ತಾರೆ. ವಿಜೇತ ತಂಡಕ್ಕೆ ಶಾಲಾ ಆಡಳಿತ ಮಂಡಳಿ, ಆಡಳಿತಾಧಿಕಾರಿ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದನೆ ಸಲ್ಲಿಸಿರುತ್ತಾರೆ. ಜಿಲ್ಲಾ ಮಟ್ಟದ ಸ್ಪರ್ಧೆ ದಿನಾಂಕ 07/09 /2022 ರಂದು ಸೈಂಟ್ ಪೌಲರ್ ಹಿರಿಯ ಪ್ರಾಥಮಿಕ ಶಾಲೆ, ನಾರಾವಿಯಲ್ಲಿ ಜರಗಲಿರುವುದು.

- Advertisement -

Related news

error: Content is protected !!