Saturday, May 18, 2024
spot_imgspot_img
spot_imgspot_img

ಕಾರ್ ಖರೀದಿಗೆ ಬಂದ ರೈತನಿಗೆ ಅವಮಾನ; 10 ಲಕ್ಷ ರೂ. ತಂದು ಕಾರ್ ನೀಡುವಂತೆ ಪಟ್ಟು ಹಿಡಿದ ರೈತ ಕೆಂಪೇಗೌಡ

- Advertisement -G L Acharya panikkar
- Advertisement -
suvarna gold

ತುಮಕೂರು: ಕಾರು ಖರೀದಿಗೆ ಬಂದ ಯುವ ರೈತನಿಗೆ ಅವಮಾನ ಮಾಡಿದ ಘಟನೆ ತುಮಕೂರಿನ ರಾಮನಪಾಳ್ಯದಲ್ಲಿ ನಡೆದಿದೆ. ಇಲ್ಲಿನ ಕೆಂಪೇಗೌಡ ಎನ್ನುವ ಯುವಕ ರೈತನಿಗೆ ಅವಮಾನ ಮಾಡಲಾಗಿದೆ. ಬೋಲೆರೋ ಗೂಡ್ಸ್ ವಾಹನ ಖರೀದಿಸಲು ತುಮಕೂರಿನ ಶೋರೂಂಗೆ ಬಂದಿದ್ದ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ರಾಮನಪಾಳ್ಯ ನಿವಾಸಿ ಯುವರೈತ ಕೆಂಪೇಗೌಡಗೆ ಅವಮಾನ ಮಾಡಲಾಗಿದೆ. ಯುವಕನ ವೇಷಭೂಷಣ ನೋಡಿ ಶೋರೂಂನಲ್ಲಿ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಎಂದು ಸೇಲ್ಸ್ ಏಜೆಂಟ್​ರಿಂದ ಕೆಂಪೇಗೌಡಗೆ ಅವಮಾನ ಆಗಿದೆ. ಅವಮಾನಿಸಿದ್ದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ದುಡ್ಡು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದಾನೆ. ಆದರೆ ಶೋರೂಂ ಸೇಲ್ಸ್ ಏಜೆಂಟ್ ಮಾತ್ರ ವಾಹನ ನೀಡದೇ, ಎರಡು ಮೂರು ದಿನದಲ್ಲಿ ವಾಹನ ನೀಡುತ್ತೇವೆ ಎಂದು ಹೇಳಿದ್ದಾರೆ.

ಕಾರ್ ಶೋರೂಮ್​ನಲ್ಲಿ ಘಟನೆ ನಡೆದಿದ್ದೇನು?

ನಮ್ಮನ್ನು ನೋಡಿ ಕೇವಲವಾಗಿ ಮಾತನಾಡಿದರು. 10 ರೂಪಾಯಿ ತರಲು ಯೋಗ್ಯತೆ ಇಲ್ಲ ಎಂದು ಅವಮಾನಿಸಿದರು. ಆಗ ನಾವು ಅರ್ಧಗಂಟೆಯಲ್ಲಿ 10 ಲಕ್ಷ ಹೊಂದಿಸಿ ತಂದು ಕೊಟ್ಟಿದ್ದೀವಿ. ಕಳೆದ ಜನವರಿ 4 ರಂದು ಶೋರೂಮ್​​ಗೆ ಹೋಗಿ ಗೂಡ್ಸ್ ವಾಹನ ತರಲು ಹೇಳಿಬರಲಾಗಿತ್ತು. ಅದರಂತೆ‌ ಮೊನ್ನೆ ಎರಡು ಲಕ್ಷ ಹಣ ಕಟ್ಟಿ ವಾಹನ ತರಲು ಶೋರೂಮ್​ಗೆ ಹೋಗಿದ್ವಿ.ಎರಡು ಲಕ್ಷ ಹಣ ಕಟ್ತೀವಿ. ವಾಹನ ಕೊಡಿ ಅಂತಾ ಕೇಳಿದ್ದೀವಿ. ಆಗ ಶೋರೂಮ್ ಸಿಬ್ಬಂದಿ ಏಳು ಜನರು ಕೂಡ ತಮಾಷೆ ಮಾಡಲು ಬಂದಿದ್ದೀರಾ. ವಾಹನ ತಗೊಂಡು ಹೋಗೊದಕ್ಕೆ ಬಂದಿಲ್ಲ. ನಿಮ್ಮ ಯೋಗ್ಯತೆಗೆ 10 ರೂಪಾಯಿ ಇಲ್ಲ, ಸುಮ್ಮನೇ ಬಂದಿದ್ದೀರಾ ಅಂತಾ ಅವಮಾನ ಮಾಡಿದ್ದರು ಎಂದು ಹೇಳಲಾಗಿದೆ.

vtv vitla

25 ನಿಮಿಷ ಸಮಯ ಕೇಳಿದ್ದೀವಿ. ಆಗಲೂ ಅವರು ಕಿಚಾಯಿಸಿದ್ದಾರೆ. ನಾವು ಹೇಳಿದ ಸಮಯಕ್ಕೆ ಹಣ ತಂದು ಕೊಟ್ಟಿದ್ದೀವಿ. ಆದರೆ ಅವರು ವಾಹನ ನೀಡಲಿಲ್ಲ. ನಾವು ರೈತರು ಅಂತಾ ಅವಮಾನ ಮಾಡಿದ್ದಾರೆ ಅಂತಾ ಬೇಸರ ಹೊರಹಾಕಿದ್ದಾರೆ. ಬೊಲೆರೋ ವಾಹನ ತರಲು ಹೋಗಿದ್ದ ಕೆಂಪೇಗೌಡ ಹಾಗೂ ಮಾವ ರಾಮಾಂಜನೇಯ ಈ ಬಗ್ಗೆ ಟಿವಿ9ಗೆ ಹೇಳಿಕೆ ನೀಡಿದ್ದಾರೆ.

ಕ್ಯಾಂಟರ್ ಚಾಲಕರಾಗಿ ಕೆಲಸ ಮಾಡುತ್ತಿರುವ ಕೆಂಪೇಗೌಡ ಸದ್ಯ ಸ್ವಂತ ವಾಹನ ಖರೀದಿಸಲು ನಿರ್ಧರಿಸಿದ್ದ. ಹೀಗಾಗಿ ಸ್ವಂತ ವಾಹನ ತರಲು ಮಾವ ಹಾಗೂ ಸ್ನೇಹಿತರೊಂದಿಗೆ ಹೋಗಿದ್ದರು. ಈ ವೇಳೆ ಬಟ್ಟೆ ವೇಷಭೂಷಣ ಕಂಡು ಸಿಬ್ಬಂದಿ ಅವಮಾನಿಸಿದ್ದರು ಎಂದು ತಿಳಿದುಬಂದಿದೆ. ಸಿಬ್ಬಂದಿ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ರಾಜಿ ಸಂದಾನಕ್ಕೆ ಪೊಲೀಸರು ಯತ್ನಿಸುತ್ತಿದ್ದಾರೆ.

vtv vitla
vtv vitla
- Advertisement -

Related news

error: Content is protected !!