Monday, April 29, 2024
spot_imgspot_img
spot_imgspot_img

ತೆಲಂಗಾಣದಲ್ಲಿ ಅಪಘಾತ; 8 ಮಂದಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರ ಘೋಷಿಸಿದ್ದಾರೆ.

ನಿಜಾಮ್ ಸಾಗರ ವಲಯದ ಹಾಸನಪಲ್ಲಿ ಗೇಟ್‌ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಇನ್ನು ಈ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!