Friday, April 26, 2024
spot_imgspot_img
spot_imgspot_img

ದಕ್ಷಿಣ ಕನ್ನಡ: ಆ. 6ರವರೆಗೆ ನಿಷೇದಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ: ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಕಡಬದಲ್ಲಿ ಸೆಕ್ಷನ್ 144 ಮುಂದುವರಿಕೆ

- Advertisement -G L Acharya panikkar
- Advertisement -

ಚಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಕಡಬ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ವಿಧಿಸಲಾಗಿದ್ದ ನಿಷೇದಾಜ್ಞೆ ಸೆಕ್ಷನ್ ೧೪೪ ಅನ್ನು ಆಗಸ್ಟ್‌ 6ರವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶಿಸಿದ್ದಾರೆ.

ಜುಲೈ 29ರ ರಾತ್ರಿ 12ರಿಂದ ಆಗಸ್ಟ್‌ 6ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಗುಂಪು ಗೂಡುವುದು, ಸಭೆ, ಮೆರವಣಿಗೆ, ಸಮಾರಂಭಗಳನ್ನು ನಡೆಸುವುದು, ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಒಯ್ಯುವುದು, ಪ್ರತಿಕೃತಿ ಪ್ರದರ್ಶನ, ಸಾರ್ವಜನಿಕ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವಂತಹ ಕೂಗು ಉಚ್ಚರಿಸುವುದು ಸೇರಿದಂತೆ ಯಾವುದೇ ಅಪರಾಧ ಎಸಗುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ಸೂಚಿಸಿದ್ದಾರೆ.

- Advertisement -

Related news

error: Content is protected !!