Sunday, May 5, 2024
spot_imgspot_img
spot_imgspot_img

ದಕ್ಷಿಣ ಭಾರತ ಮಟ್ಟದ ಪ್ರಾದೇಶಿಕ ಕೌಶಲ್ಯ ಸ್ಪರ್ಧೆಯಲ್ಲಿ 27 ಪದಕ ಪಡೆದು ಮೊದಲ ಸ್ಥಾನ ಅಲಂಕರಿಸಿದ ಕರ್ನಾಟಕ

- Advertisement -G L Acharya panikkar
- Advertisement -
vtv vitla
vtv vitla

ಪ್ರಾದೇಶಿಕ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ 27 ಪದಕಗಳೊಂದಿಗೆ ದಕ್ಷಿಣ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ. ವಿಶಾಖಪಟ್ಟಣದಲ್ಲಿ ನಡೆದ ಕೌಶಲ್ಯ ಸ್ಪರ್ಧೆಯಲ್ಲಿ ರಾಜ್ಯವು 14 ಚಿನ್ನ, 13 ಬೆಳ್ಳಿ ಪದಕಗಳೊಂದಿಗೆ ಪ್ರಥಮ ಸ್ಥಾನ ಅಲಂಕರಿಸಿತು. ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಒಡಿಶಾ ರಾಜ್ಯದ ತಂಡಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಕರ್ನಾಟಕ ತಂಡದ 17 ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ 10 ಸ್ಪರ್ಧಿಗಳಿಗೆ ಸರ್ಕಾರಿ ಉಪಕರಣ ಕಾರ್ಯಾಗಾರದಿಂದ ತರಬೇತಿ ನೀಡಲಾಗಿತ್ತು. ರಾಜ್ಯದ 69 ಸ್ಪರ್ಧಿಗಳು 35 ಬಗೆಯ ಸ್ಪರ್ಧೆಗಳಲ್ಲಿ ಭಾಗಿವಹಿಸಿದ್ದರು. 35 ಸ್ಪರ್ಧೆಗಳಲ್ಲಿ ರಾಜ್ಯವು 27ರಲ್ಲಿ ಪದಕ ಜಯಿಸಿದೆ.

vtv vitla
vtv vitla

ರಾಜ್ಯಕ್ಕೆ ಮೆಕಾಟ್ರಾನಿಕ್ಸ್, ಮುದ್ರಣ ತಂತ್ರಜ್ಞಾನ, ಆಭರಣ ತಯಾರಿಕೆ, ಕೈಗಾರಿಕಾ ನಿಯಂತ್ರಣ, ಕಾರ್ ಪೇಂಟಿಂಗ್, ಅಡುಗೆ ತಯಾರಿಕೆ, ಪ್ಲಾಸ್ಟಿಕ್ ಡೈ ಎಂಜಿನಿಯರಿಂಗ್, ಬೇಕರಿ ಪದಾರ್ಥಗಳ ತಯಾರಿಕೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ವಿಭಾಗಗಳಲ್ಲಿ ಚಿನ್ನದ ಪದಕ ಲಭಿಸಿದೆ. ಎಂ-ಕ್ಯಾಡ್, ಕೇಶವಿನ್ಯಾಸ, ಗ್ರಾಫಿಕ್ ವಿನ್ಯಾಸ, ವಿಷುಯಲ್ ಮರ್ಕಂಡೈಸಿಂಗ್, 3ಡಿ ಡಿಜಿಟಲ್ ಗೇಮ್ ಆರ್ಟ್ ಮತ್ತು ವಾಟರ್ ಟೆಕ್ನಾಲಜಿ ವಿಭಾಗಗಳಲ್ಲಿ ರಜತ ಪದಕ ಲಭ್ಯವಾಗಿದೆ.

ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು(NSDC) ಈ ಸ್ಪರ್ಧೆಗಳನ್ನು ಆಯೋಜಿಸುತ್ತದೆ. ಇದರಲ್ಲಿನ ‘ಇಂಡಿಯಾ ಸ್ಕಿಲ್ಸ್’ ಸ್ಪರ್ಧೆಯು ದೇಶದ ಅತ್ಯಂತ ದೊಡ್ಡ ಕೌಶಲ್ಯ ಸ್ಪರ್ಧೆಯಾಗಿದೆ. ಅದರಲ್ಲಿ ಭಾರತದ ಐದು ವಲಯಗಳಲ್ಲಿ ಸ್ಪರ್ಧೆ ನಡೆದಿದ್ದು, ದಕ್ಷಿಣ ಭಾರತದ ವಲಯದಲ್ಲಿ ಕರ್ನಾಟಕವು ಮೊದಲ ಸ್ಥಾನ ಪಡೆದಿದೆ. ಸ್ಪರ್ಧೆಯಲ್ಲಿ 5 ರಾಜ್ಯಗಳ 400ಕ್ಕೂ ಅಧಿಕ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!