Wednesday, May 8, 2024
spot_imgspot_img
spot_imgspot_img

ದಲಿತ ಯುವಕನ ಮರ್ಮಾಂಗದ ತುದಿ ಕತ್ತರಿಸಿ ಬಲವಂತದ ಮತಾಂತರ.!

- Advertisement -G L Acharya panikkar
- Advertisement -
astr

ರಾಜ್ಯ ಸರ್ಕಾರ ಈಗಾಗಲೇ ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದೆ. ಆದ್ರೂ ಕೆಲ‌ ಮತಾಂಧರು ತಮ್ಮ ಕೆಲಸ ಬಿಟ್ಟಿಲ್ಲ. ಇದಕ್ಕೆ ಇಂಬು ಕೊಡುವಂಥ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ದಲಿತ ಯುವಕನೋರ್ವನ ಮರ್ಮಾಂಗದ ತುದಿ ಕತ್ತರಿಸಿ ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ 11 ಮಂದಿ ವಿರುದ್ಧ ಇಲ್ಲಿನ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ‌ ದಾಖಲಾಗಿರುವ ಈ ಎಫ್‌ಐಆರ್ ಒಮ್ಮೆ ಓದಿದ್ರೆ ರಾಜ್ಯದಲ್ಲಿ ಬಲವಂತದ ಮತಾಂತರ ಹೇಗೆಲ್ಲ ನಡೆಯುತ್ತಿದೆ ಅನ್ನೊದು ಗೊತ್ತಾಗುತ್ತೆ.

ಆರ್ಥಿಕ ಸಂಕಷ್ಟ.! ನೆರವು ಕೊಡಿಸುವ ನೆಪ.! ಮತಾಂತರ – ಬೆದರಿಕೆ.?

ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರನಿಗೆ ಹಣದ ಆಮಿಷ ಒಡ್ಡಿ ಬಳಿಕ ಆತನ ಮರ್ಮಾಂಗದ ತುದಿ ಕತ್ತರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದಾರೆ. ಆರಂಭದಲ್ಲಿ ಶ್ರೀದರ್ ಗೆ ಪರಿಚಯವಾದ ಮಂಡ್ಯದ ಅತ್ತಾವರ ರೆಹಮಾನ್, ಆರ್ಥಿಕ ನೆರವು ಕೊಡಿಸುವ ನೆಪದಲ್ಲಿ ಬೆಂಗಳೂರಿಗೆ ಕರೆದೊಯ್ದು, ಬೆಂಗಳೂರಿನ ಅಜೀಸಾಬ್ ಜೊತೆ ಸೇರಿಕೊಂಡು ಮತಾಂತರ ಪ್ಲಾನ್ ಮಾಡ್ತಾರೆ. ಇವರಿಗೆ ಹುಬ್ಬಳ್ಳಿಯ ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ಸೇರಿ ೧೦ ಕ್ಕೂ ಹೆಚ್ಚು ಜನ ಸೇರಿಕೊಂಡು ದಲಿತ ಜಾತಿಗೆ ಸೇರಿದ ಶ್ರೀಧರನ್ನ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದಾರೆ. ಇದನ್ನು ಸ್ವತಃ ಶ್ರೀಧರ ದೂರಿನಲ್ಲಿ ದಾಖಲಿಸಿದ್ದಾರೆ.

ಅರ್ಥಿಕ ಸಂಕಷ್ಟದಲ್ಲಿದ್ದ ಶ್ರೀಧರಗೆ ನೆರವು ನೀಡುವ ನೆಪದಲ್ಲಿ ಕಳೆದ ಮೇ ತಿಂಗಳಲ್ಲಿ ಬೆಂಗಳೂರಿಗೆ ಕರೆದೊಯ್ದ ಆರೋಪಿಗಳು, ಅಲ್ಲಿನ ಬನಶಂಕರಿಯ ಮಸೀದಿಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರು. ನಂತರ ಅವರಿಗೆ ಮುಸ್ಲಿಂ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ಮರ್ಮಾಂಗದ ತುದಿ ಕತ್ತರಿಸಿದ್ದಾರೆ. ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಲ್ಲದೆ, ಮತಾಂತರದ ಬಗ್ಗೆ ಬಾಂಡ್ ಪೇಪರ್ ನಲ್ಲಿ ಸಹಿ‌ ಪಡೆದಿದ್ದಾರೆ. ಅಲ್ಲಿಂದ ತಿರುಪತಿಗೆ ಕರೆದೊಯ್ದು, ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿದ್ದಾರೆ.

ಪ್ರತಿವರ್ಷ ಮೂವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಬೇಕೆಂದು ಆರೋಪಿಗಳು ಶ್ರೀಧರ ಅವರಿಗೆ ಬೆದರಿಸಿದ್ದಾರೆ. ಅವರ ಕೈಯ್ಯಲ್ಲಿ ಪಿಸ್ತೂಲ್ ಹಿಡಿಸಿ ಫೋಟೊ ತೆಗೆದು, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಭಯೋತ್ಪಾದಕನೆಂದು ಬಿಂಬಿಸುವುದಾಗಿ ಹೆದರಿಸಿದ್ದಾರೆ. ನಂತರ ಅವರ ಬ್ಯಾಂಕ್ ಖಾತೆಗೆ 35 ಸಾವಿರ ರೂ. ವರ್ಗಾಯಿಸಿ, ತಾವು ಹೇಳಿದಂತೆ ಕೇಳಬೇಕು ಎಂದು ಜೀವ ಬೆದರಿಕೆ ಹಾಕಿದ್ದಾರೆ.

ಶ್ರೀಧರ ಅವರು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸೆಪ್ಟೆಂಬರ್. 21ರಂದು ಹುಬ್ಬಳ್ಳಿಯ ಬೈರಿದೇವರಕೊಪ್ಪಕ್ಕೆ ಬಂದಾಗ, ಅಪರಿಚಿತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆದ ಅವರು, ಈ ಹಿಂದಿನ ಘಟನೆಯಿಂದ ಬೇಸತ್ತು ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪ್ರಕರಣ ಬೆಳಕಿಗೆ ಬಂದಿದೆ.

- Advertisement -

Related news

error: Content is protected !!