Tuesday, May 7, 2024
spot_imgspot_img
spot_imgspot_img

ದಸರಾ ರಜೆಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ, ಸಚಿವರಿಗೆ ಶಿಕ್ಷಕರ ಪತ್ರ..!!

- Advertisement -G L Acharya panikkar
- Advertisement -

ಸರ್ಕಾರಿ ಶಾಲೆಗಳ ದಸರಾ ರಜೆಯನ್ನು ಅಕ್ಟೋಬರ್ 2 ರಿಂದ 31 ರವರೆಗೆ ದಸರಾ ರಜೆಯನ್ನು ನೀಡಲಾಗಿತ್ತು. ಈ ಹಿಂದೆ ನೀಡುತ್ತಿದ್ದ ರಜೆಗೆ ಹೋಲಿಕೆ ಮಾಡಿದರೆ ಈ ಬಾರಿ ರಜೆ ಕಡಿತವಾಗಿದೆ.

ಕೋವಿಡ್‌ನಿಂದಾಗಿ ಲಾಕ್‌ಡೌನ್ ಸಮಯದಲ್ಲಿ ನಡೆಯದ ತರಗತಿಗಳನ್ನು ಸರಿದೂಗಿಸಲು ದಸರಾ ರಜೆಯನ್ನು ಮೊಟಕುಗೊಳಿಸಲಾಗಿದೆ. ಆದರೆ ಈ ಬಾರಿ ಜನಜೀವನ ಸಹಜವಾಗಿದ್ದರೂ ರಜೆ ಕಡಿತಗೊಳಿಸಿರುವುದು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಹೊರಡಿಸಿದ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, 2023-24 ಶೈಕ್ಷಣಿಕ ವರ್ಷಕ್ಕೆ ದಸರಾ ರಜೆಯನ್ನು ಕಡಿಮೆ ಮಾಡಲಾಗಿದೆ.

ಈ ಬಾರಿ ಅಕ್ಟೋಬರ್ 8ರಿಂದ 24ರವರೆಗೆ ಸಾಮಾನ್ಯ ಶಾಲೆಗಳಿಗೆ ದಸರಾ ರಜೆ ನೀಡಲಾಗಿದ್ದು, ವಿಶೇಷ ಶಾಲಾ ಮಕ್ಕಳಿಗೆ ದಸರಾ ರಜೆ ರದ್ದುಗೊಳಿಸಲಾಗಿದೆ. ಹೀಗಾಗಿ ಶಿಕ್ಷಕರು ನಿರಂತರವಾಗಿ ಕರ್ತವ್ಯ ನಿರ್ವಹಿಸಬೇಕು. ಕರ್ನಾಟಕ ಶಿಕ್ಷಣ ಇಲಾಖೆಯು ಈ ಬಾರಿ 15 ದಿನಗಳ ಕಾಲ ದಸರಾ ರಜೆ ಘೋಷಿಸಿರುವುದು ಇದೀಗ ರಾಜ್ಯದ ಶಾಲಾ ಶಿಕ್ಷಕರನ್ನು ಕೆರಳಿಸಿದೆ.

ದಸರಾ ರಜೆ ವಿಸ್ತರಣೆ ಕುರಿತು ಶಿಕ್ಷಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ. ಅಕ್ಟೋಬರ್ 24 ರಂದು ವಿಜಯದಶಮಿ ಆಚರಿಸಲಾಗುತ್ತಿದ್ದು, ಹಬ್ಬದ ಮರುದಿನ ಅಕ್ಟೋಬರ್ 25 ರಂದು ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಆದೇಶಿಸಿದ್ದು, ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಒತ್ತಡ ಹೆಚ್ಚುತ್ತದೆ ಎಂದು ಶಿಕ್ಷಕರು ಆತಂಕ ವ್ಯಕ್ತಪಡಿಸಿದರು.

ಇಡೀ ರಾಜ್ಯದಲ್ಲಿ ಎಲ್ಲ ಶಾಲೆಗಳಿಗೆ ರಜೆ, ಮಕ್ಕಳು ರಜೆಯ ಖುಷಿಯಲ್ಲಿದ್ದಾರೆ. ಆದರೆ ದಸರಾ ರಜೆಯನ್ನು ಅಕ್ಟೋಬರ್ 30ರವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುವಲ್ಲಿ ಶಿಕ್ಷಕರು ನಿರತರಾಗಿದ್ದಾರೆ.

- Advertisement -

Related news

error: Content is protected !!