Sunday, May 19, 2024
spot_imgspot_img
spot_imgspot_img

ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗ ಒಡೆದು ಕಳ್ಳತನ; ಎಸ್ಕೇಪ್‌ ವೇಳೆ ಅಪಘಾತ..! ರೆಡ್‌ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೋರರು

- Advertisement -G L Acharya panikkar
- Advertisement -

ಭಟ್ಕಳ: ತಾಲ್ಲೂಕಿನ ಮುಟ್ಟಳಿ ಗ್ರಾಮ ಪಂಚಾಯತ ವ್ಯಾಪ್ತಿ ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಗಿಲ ಬೀಗ ಮುರಿದು ದೇವಸ್ಥಾನದಲ್ಲಿ ಇದ್ದ ವಸ್ತುಗಳನ್ನು ಕಳ್ಳತನ ಮಾಡಿ ಸಾಗಿಸುವಾಗ ಇಬ್ಬರು ಖತರ್ನಾಕ್ ಕಳ್ಳರು ಸ್ಥಳೀಯ ಜನರ ಕೈಯಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಆರೋಪಿಗಳನ್ನು ಇರ್ಫಾನ್ ಅನ್ನರಸಾಬ್ ಹಾಗೂ ಆರೀಫ್ ಅನ್ನಾರ ಎಂದು ತಿಳಿದು ಬಂದಿದೆ. ಇವರು ಮೂಲತಃ ಟಿಪ್ಪು ನಗರ ಶಿವಮೊಗ್ಗ ನಿವಾಸಿ ಎಂದು ಗುರುತಿಸಲಾಗಿದೆ.

ನಶೆಯಲ್ಲಿದ್ದ ಕಳ್ಳರು ರಾತ್ರಿ ಸಮಯದಲ್ಲಿ ನಿರ್ಜನ ಪ್ರದೇಶದಲ್ಲಿ ಇರುವ ಮುಟ್ಟಳ್ಳಿ ಮತ್ತು ತಲಾನ ಗ್ರಾಮದ ಜನರು ಪೂಜಿಸುವ ಶಕ್ತಿ ದೇವತೆ ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗವನ್ನು ಒಡೆದು ಒಳಗೆ ಹೋಗಿ ಪ್ರವೇಶಿಸಿ ದೇವಸ್ಥಾನದ ಹುಂಡಿಗಳನ್ನು ಒಡೆದಿದ್ದಾರೆ.

ದೇವಸ್ಥಾನದ ಹುಂಡಿಯಲ್ಲಿದ್ದ ಹಣ ಮತ್ತು ದೇವಸ್ಥಾನದ ಗಂಟೆಗಳು, ಕಾಲುದೀಪ ಮತ್ತು ದೇವರ ಹರಿವಾಣ, ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳುವು ಮಾಡಿ ಚೀಲಗಳಲ್ಲ ತುಂಬಿ ಕೊಂಡು ದೇವಸ್ಥಾನ ಪಕ್ಕದಲ್ಲಿ ಇದ್ದ ಮರದ ಕೆಳಗೆ ಅವಿತ್ತು ಕುಳಿತುಕೊಂಡಿದ್ದರು. ಸ್ಥಳೀಯ ನಿವಾಸಿಯೊಬ್ಬರು ತೋಟಕ್ಕೆ ನೀರು ಬಿಟ್ಟು ಅದೇ ದಾರಿಯಲ್ಲಿ ಮನೆಗೆ ಬೈಕ್ ಮೇಲೆ ಸಾಗುತ್ತಿದ್ದ ವೇಳೆ ಅನುಮಾನ ಗೊಂಡು ಗಾಡಿ ಹೆಡ್ ಲೈಟ್ ಅವರ ಮುಖದ ಮೇಲೆ ಬಿಟ್ಟಿದ್ದಾರೆ. ವಿಚಾರಿಸಿದ್ದಾಗ ಕಳ್ಳರು ಹಲ್ಲೆಗೆ ಯತ್ನಿಸಿದ್ದು, ಅವರಿಂದ ತಪ್ಪಿಸಿಕೊಂಡು ತಾವು ತಂದಿದ್ದ ಬೈಕ್ ಸ್ಟಾರ್ಟ್ ಮಾಡಿ ಅವಸರದಲ್ಲಿ ಒಡಿ ಹೋಗವಾಗ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾರ್ವಜನಿಕರ ಕೈಗೆ ತಗಲಾಕ್ಕೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ 112 ಪೋಲಿಸ್ ವಾಹನ ಮತ್ತು ಸಿ.ಪಿ.ಐ ಚಂದನ ಗೋಪಾಲ ಹಾಗೂ ಪಿ.ಎಸ್.ಐ ಶ್ರೀಧರ್ ನಾಯ್ಕ ಗ್ರಾಮೀಣ ಠಾಣೆ ಪೋಲಿಸ್ ಆಗಮಿಸಿ ಕಳ್ಳರನ್ನು ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!