Saturday, May 18, 2024
spot_imgspot_img
spot_imgspot_img

ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕಾರಣ ಪ್ರವೇಶ; ಸೂರಜ್ ರೇವಣ್ಣ ಜೆಡಿಎಸ್​ನ ಎಂಎಲ್​ಸಿ ಅಭ್ಯರ್ಥಿ.!

- Advertisement -G L Acharya panikkar
- Advertisement -

vtv vitla
vtv vitla


ಹಾಸನ: ಜಾತ್ಯತೀತ ಜನತಾದಳ (ಜೆಡಿಎಸ್​) ಪಕ್ಷವು ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಡಾ.ಸೂರಜ್ ರೇವಣ್ಣ ಅವರಿಗೆ ಟಿಕೆಟ್ ನೀಡಲು ಮುಂದಾಗಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಸೂರಜ್ ರೇವಣ್ಣ ಎಂಎಲ್​ಸಿ ಚುನಾವಣೆ ಅಭ್ಯರ್ಥಿಯಾಗಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಲಿದ್ದಾರೆ.

ಹಾಸನದಲ್ಲಿ ಇಂದು ಮಧ್ಯಾಹ್ನ 12.15ಕ್ಕೆ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸಲಿದ್ದಾರೆ. ಹಾಸನ ಜಿಲ್ಲೆ ಶಾಸಕರ ಸಭೆಯಲ್ಲಿ ಎಚ್​.ಡಿ.ರೇವಣ್ಣ ಅವರ ಪುತ್ರ ಸೂರಜ್ ಅವರಿಗೆ ಟಿಕೆಟ್ ನೀಡಲು ಒಮ್ಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸೂರಜ್ ರೇವಣ್ಣ ಅವರಿಗೆ ಟಿಕೆಟ್ ಕೊಡುವ ನಿರ್ಧಾರವು ಪಕ್ಷದ ಬಗ್ಗೆ ಬಹುಕಾಲದಿಂದ ಇರುವ ಆಕ್ಷೇಪವಾದ ಕುಟುಂಬ ರಾಜಕಾರಣದ ಬಗ್ಗೆ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದೆ.

ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ಕುಟುಂಬದ ಬಹುತೇಕರು ಈಗಾಗಲೇ ರಾಜಕೀಯದಲ್ಲಿ ಪ್ರಭಾವಿ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಇದೀಗ ಇದೇ ಕುಟುಂಬದ ಮತ್ತೊಂದು ಕುಡಿಗೆ ಅವಕಾಶ ನೀಡುವ ಬದಲು, ಕಾರ್ಯಕರ್ತರನ್ನು ಮೇಲೆತ್ತಲು ಪ್ರಯತ್ನಿಸಬೇಕಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ.

vtv vitla
- Advertisement -

Related news

error: Content is protected !!