Sunday, May 19, 2024
spot_imgspot_img
spot_imgspot_img

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 25,467 ಕೊರೊನಾ ಪ್ರಕರಣ ಪತ್ತೆ!

- Advertisement -G L Acharya panikkar
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 25,467 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,24,74,773ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಬಾಯ್ಲರ್ ಸ್ಪೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರ ಸಾವು

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 389 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 435110ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 319551 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 39486 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31720112 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇದನ್ನೂ ಓದಿ: ಪುತ್ತೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕ ಕುಮಾರ್ ಮಾಸ್ತರ್ ಕುಮಾರಮಂಗಲ‌ ಅಸ್ತಂಗತ!

ನಿನ್ನೆ ದೇಶದಲ್ಲಿ 16,47,526 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 63,85,298 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 58,89,97,805 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

- Advertisement -

Related news

error: Content is protected !!