Friday, May 3, 2024
spot_imgspot_img
spot_imgspot_img

ದೇಶದಲ್ಲಿ ಮುಂಗಾರು ಅಂತ್ಯ, ಹಿಂಗಾರು ಮಳೆ ಆರಂಭ.!!

- Advertisement -G L Acharya panikkar
- Advertisement -

ದಕ್ಷಿಣ ಭಾರತದ ರಾಜ್ಯಗಳಲ್ಲಿ ಶನಿವಾರ ಹಿಂಗಾರು ಮಳೆ ಪ್ರವೇಶಿಸಲಿದೆ. ಅದರ ಮುನ್ಸೂಚನೆಯಂತೆ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಅಕ್ಟೋಬರ್ 29ರಂದು ಶನಿವಾರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈಶಾನ್ಯ ಮಾರುತಗಳು ಆಗಮಿಸುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಇದಕ್ಕೆ ಪೂರಕವಾದ ವಾತಾವರಣ ಈ ಈಗಾಗಲೇ ನಿರ್ಮಾಣವಾಗಿದ್ದು, ಗುಡುಗು ಸಹಿತ ಹಗುರದಿಂದ ಸಾಧಾರಣವಾಗಿ ಮಳೆ ಬರಲಿದೆ ಎಂದು ಮಳೆ ಮುನ್ಸೂಚನೆ ವರದಿ ತಿಳಿಸಿದೆ. ಅಕ್ಟೋಬರ್ 29ರಿಂದ ನವೆಂಬರ್ 1ರ ಮೂರು ದಿನ ಅವಧಿಯಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದಂತೆ ಬಹಳಷ್ಟು ಕಡೆಗಳಲ್ಲಿ ಮಳೆ ಆಗಲಿದೆ. ಕೆಲವು ಕಡೆಗಳಲ್ಲಿ ಜೋರು ಮಳೆ ಆಗುವ ಸಂಭವವಿದೆ. ನವೆಂಬರ್ 1ರವರೆಗೆ ಕೇರಳ ಮತ್ತು ಮಾಹೆಯಲ್ಲಿ, ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂ ಹಾಗೂ ರಾಯಲಸೀಮಾದ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆ ಆಗಲಿದೆ.

ನವೆಂಬರ್ 1ರಂದು ಮಾತ್ ಕರಾವಳಿ ಆಂಧ್ರಪ್ರದೇಶ, ಯಾನಂನಲ್ಲಿ, ತಮಿಳುನಾಡು, ಪುದುಚೇರಿಗಳಲ್ಲಿ ಅತ್ಯಧಿಕ ಮಳೆ ದಾಖಲಾಗುವ ನಿರೀಕ್ಷೆ ಇದೆ. ಅಂದು ಈಶಾನ್ಯ ಮಾರುತಗಳ ಈ ಭಾಗದಲ್ಲಿ ಚುರುಕಾಗಿರಲಿವೆ ಎಂದು ಅಂದಾಜಿಸಲಾಗಿದೆ. ಅದೇ ರೀತಿ ಅಕ್ಟೋಬರ್ 31 ಹಾಗೂ ನವೆಂಬರ್ 1ರ ಈ ಎರಡು ದಿನ ಉತ್ತರ ಭಾರತದ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಾಫರ್‌ಬಾದ್, ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಆಗಾಗ ಜಿಟಿ ಜಿಟಿ ಮಳೆ ಇಲ್ಲವೇ ಸಾಧಾರಣ ಮಳೆ ಸುರಿಯಲಿದೆ.

ದೇಶದ ಇಷ್ಟು ಮಳೆ ಮುನ್ಸೂಚಿತ ಭಾಗಗಗಳನ್ನು ಹೊರತುಪಡಿಸಿದರೆ ಉಳಿದ ಭಾಗಗಳ್ಲಲಿ ಮುಂದಿನ 5 ದಿನಗಳಲ್ಲಿ ಶುಷ್ಕ ವಾತಾವರಣ, ಒಣ ಹವೇ ಕಂಡು ಬರಲಿದೆ. ಈಗಾಗಲೇ ಈಶಾನ್ಯ ಮಾರುತಗಳು ಉತ್ತರ ಭಾರತದ ಹಲವು ಭಾಗಗಳನ್ನು ಪ್ರವೇಶಿಸಿದೆ. ಶುಕ್ರವಾರದ ಹಿಂದಿನ 24ಗಂಟೆಗಳಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬಿದ್ದಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗಿದೆ ಎಂದು ಭಾರತೀಯ ಹವಮಾನ ಕೇಂದ್ರ ತಿಳಿಸಿದೆ.

- Advertisement -

Related news

error: Content is protected !!