- Advertisement -
- Advertisement -
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 37,875 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 369 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ಗೆ ಸಾವನ್ನಪ್ಪಿದವರ ಸಂಖ್ಯೆ 4,41,411ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.
ಇನ್ನು ದೇಶದಲ್ಲಿ3,91,256 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 39114 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,22,64,051 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
- Advertisement -