Saturday, April 20, 2024
spot_imgspot_img
spot_imgspot_img

ದೇಶವನ್ನೇ ಬೆಚ್ಚಿಬೀಳಿಸಿದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಮಹತ್ವದ ತೀರ್ಪು ನೀಡಿದ ಕೋರ್ಟ್

- Advertisement -G L Acharya panikkar
- Advertisement -

ಕಳೆದ ವರ್ಷ ದೇಶಾದ್ಯಂತ ತೀವ್ರ ಸಂಚಲನ ಉಂಟುಮಾಡಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ಸಾವಿನ ಕೇಸ್​ನಲ್ಲಿ ಗಂಡನೇ ಹಂತಕನೆಂದು ಕೋರ್ಟ್ ತೀರ್ಪು ನೀಡಿದೆ. ಕಳೆದ ವರ್ಷ ಜೂನ್‌ನಲ್ಲಿ ತನ್ನ ಮನೆಯಲ್ಲಿ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಈಕೆಯ ಸಾವಿಗೆ ಪತಿಯ ವರದಕ್ಷಿಣೆ ಕಿರುಕುಳ ಆರೋಪ ಸಾಬೀತಾಗಿದೆ. ಪತಿಯನ್ನು ವರದಕ್ಷಿಣೆ ಸಾವು ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೇರಳದ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ-1 ಸುಜಿತ್ ಕೆ ಎನ್ ಅವರು ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿ ವರದಕ್ಷಿಣೆ ಸಂಬಂಧಿತ ಕಿರುಕುಳದ ಅಪರಾಧದ ಮೇಲೆ ವಿಸ್ಮಯಾಳ ಪತಿ ಎಸ್ ಕಿರಣ್ ಕುಮಾರ್‌ ನನ್ನು ಆರೋಪಿ ಎಂದು ಘೋಷಿಸಿ ೧೦ ವರ್ಷಗಳ ಜೈಲು ಶಿಕ್ಷೆ ಘೋಷಿಸಿದೆ. ೧೨.೫೫ ಲಕ್ಷ ದಂಡನೆ ಇದರಲ್ಲಿ ೨ ಲಕ್ಷ ಹಣವನ್ನು ವಿಸ್ಮಯಾಳ ಪೋಷಕರಿಗೆ ನೀಡಲು ಕೋರ್ಟ್ ಆದೇಶಿಸಿದೆ.

ಪ್ರಕರಣ ಏನು?: ವಿಸ್ಮಯಾ ಅವರು ಜೂನ್ 21, 2021 ರಂದು ಕೊಲ್ಲಂ ಜಿಲ್ಲೆಯ ಸಾಸ್ತಾಮಕೋಟಾದಲ್ಲಿ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಘಟನೆಗೆ ಒಂದು ದಿನ ಮೊದಲು, ವಿಸ್ಮಯಾ ತನ್ನ ಸಂಬಂಧಿಕರಿಗೆ ವರದಕ್ಷಿಣೆ ಕಿರುಕುಳದ ಆರೋಪದ ಬಗ್ಗೆ ವಾಟ್ಸ್​ಆಯಪ್​ ಸಂದೇಶಗಳನ್ನು ಕಳುಹಿಸಿದ್ದಳು. ಜೊತೆಗೆ ತನ್ನ ದೇಹದ ಮೇಲಾದ ಗಾಯಗಳು ಮತ್ತು ಹೊಡೆತಗಳ ಗುರುತುಗಳುಳ್ಳ ಫೋಟೋಗಳನ್ನು ರವಾನಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದರು. ತನಿಖೆ ನಡೆಸಿದ ಪೊಲೀಸರು, ವರದಕ್ಷಿಣೆ ಕಿರುಕುಳದಿಂದ ವೈದ್ಯ ವಿದ್ಯಾರ್ಥಿನಿ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕೇರಳ ಪೊಲೀಸರು 500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

- Advertisement -

Related news

error: Content is protected !!