Sunday, August 30, 2026
spot_imgspot_img
spot_imgspot_img

ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಯ ನಿಗೂಡ ಸಾವು

- Advertisement -
- Advertisement -

ದಾವಣಗೆರೆ: ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಸಂಭವಿಸಿದೆ.

ನಗರದ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ ದುರ್ದೈವಿ

ಆತ ಇಂದು ಗಣಿತ ಪರೀಕ್ಷೆ ಬರೆಯಬೇಕಾಗಿತ್ತು. ಶುಕ್ರವಾರ ರಾತ್ರಿ ಮನೆಯ ಟೆರಸ್ ಮೇಲೆ ಓದುತ್ತಿದ್ದನು. 11.30ರ ಸಮಯದಲ್ಲಿ ಮಗ ಓದುತ್ತಿರುವುದನ್ನು ನೋಡಿ ಪೋಷಕರು ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮಿಥುನ್ ಟೆರಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವುದು ಕಂಡು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳಕ್ಕೆ ಶ್ವಾನದಳದೊಂದಿಗೆ ಪೋಲೀಸರು ತನಿಖೆ ಶುರು ಮಾಡಿದ್ದಾರೆ. ದಂಪತಿಗೆ ಮಿಥುನ್ ಏಕೈಕ ಪುತ್ರನಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದಿರುವ ಮಗನ ಶವ ಕಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

- Advertisement -

Related news

error: Content is protected !!