Thursday, April 25, 2024
spot_imgspot_img
spot_imgspot_img

ದ.ಕ ಕೋವಿಡ್-19 ಭೀತಿ; ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ

- Advertisement -G L Acharya panikkar
- Advertisement -
vtv vitla

ಮಂಗಳೂರು: ಚೀನಾ, ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಾನುಸಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವೊಂದು ಕ್ರಮಗಳನ್ನು ಪಾಲಿಸಲು ಜಿಲ್ಲಾಧಿಕಾರಿಯವರು ಸಲಹೆ ಮಾಡಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನ ಎಚ್ಚರಿಕೆ ವಹಿಸುವುದು ಅವಶ್ಯವಾಗಿರುತ್ತದೆ. ಅಲ್ಲದೆ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.ವಿಶೇಷವಾಗಿ ವೃದ್ದರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಇನ್ನು ಸಭೆ ಸಮಾರಂಭಗಳ ಆಯೋಜಕರು ಕೆಲವೊಂದು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರ ಪಾಲನೆ ಅತೀ ಅಗತ್ಯ.

ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಧರಿಸಬೇಕು. ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್‍ ಎಂ.ಆರ್‍. ತಿಳಿಸಿದ್ದಾರೆ.

- Advertisement -

Related news

error: Content is protected !!