Thursday, April 25, 2024
spot_imgspot_img
spot_imgspot_img

ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್‌ ಟೂರ್ನಿ

- Advertisement -G L Acharya panikkar
- Advertisement -
driving

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಟೂರ್ನಮೆಂಟ್ ಗೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು.ಸದಾ ಕೆಲಸದ ಒತ್ತಡದಲ್ಲಿರುವ ಅಧಿಕಾರಿಗಳು ಮತ್ತು ಪತ್ರಕರ್ತರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಲು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು..

ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರಾಯ್, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋಣಾವನೆ ಋಷಿಕೇಶ್ ಭಗವಾನ್, ಮಂಗಳೂರು ಉಪವಿಭಾಗ ಅಧಿಕಾರಿ ಮದನ್ ಮೋಹನ್, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇದರ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು.ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ ಸೋಜ, ಖ್ಯಾತ ವೈದ್ಯರಾದ ಡಾ.ಅವಿನಾಶ್, ದ.ಕ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು ಟೂರ್ನಮೆಂಟ್ ನಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಇಲೆವೆನ್, ಕುಲಪತಿ ತಂಡ,ಸಹ್ಯಾದ್ರಿ, ಪತ್ರಕರ್ತರ ನಗರ ಮತ್ತು ಗ್ರಾಮೀಣ ತಂಡಗಳು ಭಾಗವಹಿಸಿದ್ದವು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು, ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ವಿಜಯ್ ಕೋಟ್ಯಾನ್ ಕಾರ್ಯ ಕ್ರಮ ನಿರೂಪಿಸಿದರು.

- Advertisement -

Related news

error: Content is protected !!