Sunday, June 21, 2026
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿದ್ದ ರಾತ್ರಿ ನಿರ್ಬಂಧ ತೆರವು; ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

- Advertisement -
- Advertisement -

ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಸದ್ಯ ನಿರ್ಬಂಧಗಳನ್ನು ತೆರೆಯಲು ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾತ್ರಿ 9 ಗಂಟೆಗೆ ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಆದರೆ ನಾಳೆಯಿಂದ ರಾತ್ರಿ 9 ಗಂಟೆಯ ನಂತರವು ಅಂಗಡಿಗಳನ್ನು ಓಪನ್ ಇಡಬಹುದು. ಬಾರ್, ವೈನ್ ಶಾಪ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೂ ಕೂಡ ಯಾವುದೇ ನಿರ್ಬಂಧವಿರುವುದಿಲ್ಲ. ಆಗಸ್ಟ್ 14 ರವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತೆ ಎಂದು ದ.ಕ‌ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!