Friday, April 19, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ರೂಲ್ಸ್ ಜಾರಿ: ಬೆಳಿಗ್ಗೆ 6 ರಿಂದ 9 ಗಂಟೆಯವರೆಗಷ್ಟೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ಕಾರ್ಯಕ್ರಮಗಳಿಗೆ ಬ್ರೇಕ್

- Advertisement -G L Acharya panikkar
- Advertisement -

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

ನಾಳೆಯಿಂದ ಅನ್ವಯವಾಗುವಂತೆ ಬೆಳಿಗ್ಗೆ 6 ಗಂಟೆಯಿಂದ 9 ಗಂಟೆಯವರೆಗಷ್ಟೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಹತ್ತಿರದ ಮೆಡಿಕಲ್ ಗಷ್ಟೇ ಹೋಗಬಹುದು. ಅನಾವಶ್ಯಕವಾಗಿ ತಿರುಗಾಡಿದ್ರೆ ವಾಹನಗಳನ್ನು ಸೀಜ್ ಮಾಡಲಾಗುತ್ತದೆ.

ಕಾರ್ಯಕ್ರಮಗಳಿಗೆ ಬ್ರೇಕ್:

ಮೇ 15 ರ ನಂತರ ದ.ಕ.ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಮದುವೆ, ಗೃಹ ಪ್ರವೇಶ ಯಾವುದಕ್ಕೂ ಅನುಮತಿ ಇಲ್ಲ. ನಿಗದಿಯಾಗಿರುವ ಕಾರ್ಯಕ್ರಮಗಳನ್ನು ಮುಂದೂಡುವಂತೆ ಮನವಿ ಮಾಡಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

driving
- Advertisement -

Related news

error: Content is protected !!