Saturday, April 20, 2024
spot_imgspot_img
spot_imgspot_img

ದ.ಕ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ; ವಾರಾಂತ್ಯದಲ್ಲಿ ಭಕ್ತಾಧಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ; ಜಿಲ್ಲಾಡಳಿತದ ಆದೇಶ

- Advertisement -G L Acharya panikkar
- Advertisement -

ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.

ಇತರ ವಿವರಗಳು ಇಂತಿವೆ…

  • ಮುಂದಿನ ಆದೇಶದವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ.
  • ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.
  • ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.
  • ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತೀಯ ಉತ್ಸವ, ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆ, ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ.
  • ಜಾತ್ರೆಗಳು, ದೇವಾಲಯದ ಉತ್ಸವಗಳು ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
driving
- Advertisement -

Related news

error: Content is protected !!