Wednesday, July 3, 2024
spot_imgspot_img
spot_imgspot_img

ದ.ಕ ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ 608 ಶಿಕ್ಷಕರ ಹುದ್ದೆಗಳು ಖಾಲಿ

- Advertisement -G L Acharya panikkar
- Advertisement -
driving

ದ.ಕ.ಜಿಲ್ಲೆಯಲ್ಲಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಲ್ಲಿ ಸುಮಾರು 608 ಶಿಕ್ಷಕರ ಹುದ್ದೆಗಳು ಕಳೆದ ಹಲವು ವರ್ಷಗಳಿಂದ ಖಾಲಿ ಬಿದ್ದಿವೆ.

ಈ ಕುರಿತು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಆಂದೋಲನವನ್ನು ಮುನ್ನಡೆಸುತ್ತಿರುವ ಪ್ರಕಾಶ್ ಅಂಚನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಸಮಸ್ಯೆಯ ಬಗ್ಗೆ ಅವರ ಗಮನ ಸೆಳೆದಿದ್ದಾರೆ.

ದ.ಕ.ಜಿಲ್ಲೆಯ ಪ್ರಾಥಮಿಕ ಶಾಲೆಗಳಲ್ಲಿ 142 ಶಿಕ್ಷಕರ ಹಾಗೂ ಹೈಸ್ಕೂಲುಗಳಲ್ಲಿ 196 ಶಿಕ್ಷಕರ ಹುದ್ದೆಗಳನ್ನು ತುಂಬಲಾಗಿಲ್ಲ. ಸುಮಾರು 200 ಶಿಕ್ಷಕರು ನಿವೃತ್ತಿಯ ಅಂಚಿನಲ್ಲಿದ್ದಾರೆ ಎಂದು ತಮ್ಮ ಪತ್ರದಲ್ಲಿ ಪ್ರಕಾಶ್ ಅಂಚನ್ ಅವರು ವಿವರಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ನಂತರ ಜಿಲ್ಲೆಯಲ್ಲಿನ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರಲಿದೆ ಎಂದು ಅವರು ಪ್ರಧಾನಿ ಅವರಿಗೆ ಮಾಡಿದ ಮನವಿಯಲ್ಲಿ ತಿಳಿಸಿದ್ದಾರೆ.

ಸರಕಾರವು ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ನಡೆಸಲು ವಿಳಂಬಿಸಿದರೆ ಮುಂದಿನ ವರ್ಷಗಳಲ್ಲಿ ಇನ್ನಷ್ಟು ಸಮಸ್ಯೆಗಳೆದುರಾಗಲಿವೆ.ಮುಚ್ಚುವ ಅಂಚಿನಲ್ಲಿದ್ದ ಬಂಟ್ವಾಳದ ಸರಕಾರಿ ಶಾಲೆ ದಡ್ಡಲಕಾಡು ಇಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದು ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಕಳೆದೈದು ವರ್ಷಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚಾಗುವಲ್ಲಿ ಪ್ರಮುಖ ಪಾತ್ರವನ್ನು ಅಂಚನ್ ನೇತೃತ್ವದ ಸ್ಥಳೀಯ ಯುವಕರ ಸಂಘಟನೆ ವಹಿಸಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದು.

ಶಾಲೆಯಲ್ಲಿ ವಿದ್ಯಾರ್ಥಿಗಳ ಸಂ ಲಖ್ಯೆ ಹೆಚ್ಚಾಗಿದ್ದರೂ ಸರಕಾರ ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಕ್ರಮಕೈಗೊಂಡಿಲ್ಲ ಎಂಬ ಕೊರಗು ಸಂಘಟನೆಗಿದೆ ಎಂದು ಪ್ರಕಾಶ್ ಅಂಚನ್ ತಿಳಿಸಿದ್ದಾರೆ.

- Advertisement -

Related news

error: Content is protected !!