- Advertisement -
- Advertisement -
ಬಂಟ್ವಾಳ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ನಂದಾವರ ನಿವಾಸಿ ಮಹಮ್ಮದ್ ಅರ್ಪಾಸ್ ನ ಮೇಲೆ ಮೂವರು ಸೇರಿ ಚೂರಿ ಇರಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಘಟನೆಯಲ್ಲಿ ಗಾಯಗೊಂಡ ಅರ್ಪಾಸ್ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ತಾಳಿಪಡ್ಪು ನಿವಾಸಿಗಳಾದ ನವಾಜ್ ಹಾಗೂ ಆತನ ಸ್ನೇಹಿತರಾದ ಜಾಕೀರ್,ಸಫ್ವಾನ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.

ಅರ್ಪಾಸ್ ನಂದಾವರ ಕೋಟೆಯ ಮೈದಾನದಲ್ಲಿದ್ದ ವೇಳೆ ಅಲ್ಲಿಗೆ ಬಂದ ಪರಿಚಯಸ್ಥ ನವಾಜ್ ಹಾಗೂ ಜಾಕೀರ್,ಸಫ್ವಾನ್ 10,000 ಹಣ ಸಾಲ ಕೇಳಿದ್ದಾರೆ.ನನಗೆ ಈಗ ಕೆಲಸ ಇಲ್ಲದ ಕಾರಣ ನನ್ನ ಬಳಿ ಹಣವಿಲ್ಲ ಎಂದು ಹೇಳಿದಾಗ ಅರ್ಪಾಸ್ ಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಎದೆಗೆ ಚೂರಿಯಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸಿದೆ.

- Advertisement -








