- Advertisement -
- Advertisement -

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಮತ್ತು ನಟ ಚೇತನ್ ಅಹಿಂಸಾ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಮತ್ತೊಂದು ಕಡೆ ಜಾಮೀನಿಗಾಗಿ ಚೇತನ್ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಕೆ.ಬಾಲನ್ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನ್ಯಾ.ಮೂರ್ತಿಗಳಿಗೆ ನಿಂದಿಸಿದ ಆರೋಪ ಹಿನ್ನೆಲೆಯಲ್ಲಿ ಚೇತನ್ ಅವರನ್ನ ಶೇಷಾದ್ರಿಪುರಂ ಪೊಲೀಸರು ಬಂಧನ ಮಾಡಿದ್ದಾರೆ. ಐಪಿಸಿ ಸೆಕ್ಷನ್ 505(2) (ಸಾರ್ವಜನಿಕರ ಕೆಡುಕಿಗೆ ಕಾರಣವಾಗುವ ಹೇಳಿಕೆಗಳು) & 504 (ಶಾಂತಿ ಭಂಗ ಉಂಟು ಮಾಡಲು ಉದ್ರೇಕಿಸುವ ಉದ್ದೇಶದಿಂದ ಮಾಡುವ ಅಪಮಾನ) ಅಡಿಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿರೋ ಶೇಷಾದ್ರಿಪುರಂ ಪೊಲೀಸರು ಚೇತನ್ ಅವರನ್ನು ಬಂಧನ ಮಾಡಲಾಗಿದೆ ಎಂದು ತಿಳಿದುಬಂದಿದೆ.


- Advertisement -







