Saturday, May 4, 2024
spot_imgspot_img
spot_imgspot_img

ನರಹಂತಕ ಕಾಡಾನೆ ಸೆರೆ; ಅಭಿಮನ್ಯು ನೇತೃತ್ವದ 5 ಸಾಕಾನೆಗಳಿಂದ ಯಶಸ್ವಿ ಕಾರ್ಯಾಚರಣೆ

- Advertisement -G L Acharya panikkar
- Advertisement -

ಕಡಬ: ಇಬ್ಬರನ್ನು ಕೊಂದಿದ್ದ ಕಾಡಾನೆ ಪೈಕಿ ಒಂದು ಕಾಡಾನೆಯನ್ನು ಕಡಬ ತಾಲೂಕಿನ ಕೊಂಬಾರು ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ. ಅರಿವಳಿಕೆ ಚುಚ್ಚುಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯಲಾಗಿದೆ. ಅಭಿಮನ್ಯು ನೇತೃತ್ವದ 5 ಸಾಕಾನೆಗಳಿಂದ ಯಶಸ್ವಿ ಕಾರ್ಯಾಚರಣೆ ಮಾಡಿ ಸೆರೆ ಹಿಡಿಯಲಾಗಿದೆ. ಫೆಬ್ರವರಿ 20ರಂದು ಎರಡು ಕಾಡಾನೆಗಳು ಇಬ್ಬರನ್ನು ಬಲಿಪಡೆದಿದ್ದವು. ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಘಟನೆ ನಡೆದಿತ್ತು. 3ನೇ ದಿನ ನಡೆದ ಕಾರ್ಯಾಚರಣೆಯಲ್ಲಿ ಒಂದು ಕಾಡಾನೆ ಸೆರೆಯಾಗಿದ್ದು, ಕಾಡಾನೆ ಸೆರೆ ಸಿಕ್ಕ 1 ಕಿ.ಮೀ ವ್ಯಾಪ್ತಿಯಲ್ಲಿ ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮಂಗಳೂರು ವಿಭಾಗದ ಡಿಸಿಎಫ್ ಡಾ. ದಿನೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. 50 ಕ್ಕೂ ಹೆಚ್ಚು ಸಿಬ್ಬಂದಿ, ಮಾವುತರು, ಕಾವಾಡಿಗರು, ಸ್ಥಳೀಯರ ಮೂಲಕ ಕಾರ್ಯಾಚರಣೆ ಮುಂದುವರೆದಿದೆ. ಅಲ್ಲದೆ ಇದರಲ್ಲಿ ನಾಗರಹೊಳೆ ಹಾಗೂ ಮಂಗಳೂರಿನ ತಜ್ಞ ವೈದ್ಯಾಧಿಕಾರಿಗಳ ತಂಡವು ಭಾಗಿಯಾಗಿದ್ದವು.

ಡ್ರೋನ್ ಕ್ಯಾಮೆರಾ ಮೂಲಕ ಕಾಡಾನೆಗಳ ಚಲನವಲನ ಟ್ರ್ಯಾಕ್ ಮಾಡಿ ಕಾಡಾನೆ ಸೆರೆಗೆ ಪ್ಲಾನ್ ಮಾಡಲಾಗಿತ್ತು. ಅರಣ್ಯ ಇಲಾಖೆಯ ಪ್ರಕಾರ ನಾಲ್ಕು ಕಾಡಾನೆ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಫೆ. 20ರಂದು ಎರಡು ಕಾಡಾನೆಗಳು ಕಾಣಿಸಿಕೊಂಡಿದ್ದವು. ಇದರ ಸಾಕಾನೆಗಳು ಕಾಡಾನೆಗಳನ್ನು ಹಿಡಿಯಲು ಕಾರ್ಯಾಚರಣೆಗೆ ಇಳಿದಿದ್ದವು.

- Advertisement -

Related news

error: Content is protected !!