Monday, November 9, 2026
spot_imgspot_img
spot_imgspot_img

ನವಜಾತ ಶಿಶುಗಳ ವಾರ್ಡ್‌ನಲ್ಲಿ ವಿದ್ಯುತ್ ಕಡಿತ; 4 ಮಕ್ಕಳು ಬಲಿ

- Advertisement -
- Advertisement -

ನವಜಾತ ಶಿಶುಗಳ ವಾರ್ಡ್‌ನಲ್ಲಿ 4 ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡ ಹಿನ್ನೆಲೆಯಲ್ಲಿ 4 ಶಿಶುಗಳು ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಅಂಬಿಕಾಪುರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಈ ಕುರಿತು ಛತ್ತೀಸ್‌ಗಡದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ಡಿಯೊ ಮಾಹಿತಿ ನೀಡಿದ್ದು, ‘ಘಟನೆ ಕುರಿತಂತೆ ತನಿಖೆ ನಡೆಸಲು ತನಿಖಾ ತಂಡ ರಚನೆಗೆ ಆರೋಗ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಹೆಚ್ಚಿನ ಮಾಹಿತಿ ಪಡೆಯಲು ಅಂಬಿಕಾಪುರ ಆಸ್ಪತ್ರೆಗೆ ತೆರಳುತ್ತಿದ್ದು, ತನಿಖೆ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ’ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!