Thursday, June 18, 2026
spot_imgspot_img
spot_imgspot_img

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್’ಗೆ ನಿಗದಿ: ರಾಜ್ಯ ಸರ್ಕಾರ ಆದೇಶ

- Advertisement -
- Advertisement -
astr

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಟ್ವಿಟ್‌ ಮಾಡಿರುವ ಸಚಿವ ಸುನೀಲ್‌ ಕುಮಾರ್‌, ಕುವೆಂಪು ವಿರಚಿತ ನಾಡಗೀತೆ’ ಜಯಭಾರತ ಜನನಿಯ ತನುಜಾತೆ’ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ.

ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಅಂತ ತಿಳಿಸಿದ್ದಾರೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ‘ಜಯ ಭಾರತ ಜನನಿಯ ತನುಜಾತೆ’ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ.

- Advertisement -

Related news

error: Content is protected !!