Thursday, May 9, 2024
spot_imgspot_img
spot_imgspot_img

ನಾಲ್ಕು ತಿಂಗಳ ಗರ್ಭಿಣಿಗೆ ಆಟೋ ರಿಕ್ಷಾ ಢಿಕ್ಕಿ, ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಗರ್ಭಿಣಿಯೊಬ್ಬರು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳದಿಂದ ಆಟೊ ರಿಕ್ಷಾ ಚಾಲಕ ಪರಾರಿಯಾಗಿದ ಘಟನೆ ಉತ್ತರಕನ್ನಡದ ಅಂಕೋಲಾದ ಬಾವಿಕೇರಿ ರಸ್ತೆಯಲ್ಲಿ ನಡೆದಿದೆ.

ಅಂಕೋಲ ನಿವಾಸಿ ಶೋಭಾ ಗೋಪಾಲ ನಾಯಕ(28) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ಶೋಭಾ ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾದ್ದು, ಅವರು ತನ್ನ ಮನೆ ಹತ್ತಿರದ ಮಣ್ಣಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಆಟೊ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ.

ಅತೀ ವೇಗದಿಂದ ರಸ್ತಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಶೋಭಾ ಮೃತಪಟ್ಟಿದ್ದಾರೆ.

ಸ್ಥಳಕ್ಕಾಗಮಿಸಿದ ಅಂಕೋಲಾ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!