Saturday, April 27, 2024
spot_imgspot_img
spot_imgspot_img

ನಾಲ್ವಡಿ ಕೃಷ್ಣರಾಜ ದತ್ತಿ ಪ್ರಶಸ್ತಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಮೋಹನ್ ಆಳ್ವ ಆಯ್ಕೆ

- Advertisement -G L Acharya panikkar
- Advertisement -

ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ 2021ನೇ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿ ಕೆ.ರಾಜಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 51ಸಾವಿರ ರೂ.ನಗದು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಸದಸ್ಯರಾದ ಚಿತ್ಕಲಾ, ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್, ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು.

- Advertisement -

Related news

error: Content is protected !!