Tuesday, May 14, 2024
spot_imgspot_img
spot_imgspot_img

ನಾಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ..!

- Advertisement -G L Acharya panikkar
- Advertisement -

ಬೆಂಗಳೂರು : ಮಾರ್ಚ್​ 29, ಏಪ್ರಿಲ್​ 4 ಅಥವಾ ಏಪ್ರಿಲ್​ 8ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 2018ರಲ್ಲಿಯೂ ರಾಜ್ಯ ಚುನಾವಣಾ ಆಯೋಗ ಮಾರ್ಚ್​ 27ರಂದು ಚುನಾವಣೆಗೆ ದಿನಾಂಕ ಘೋಷಣೆ ಮಾಡಿತ್ತು.

ರಾಜ್ಯ ಚುನಾವಣೆ ಆಯೋಗ ಕೂಡ ರಾಜ್ಯದಲ್ಲಿ ಚುನಾವಣೆಯನ್ನು ನಡೆಸುವ ವಿಚಾರವಾಗಿ ಕೆಲವೇ ದಿನಗಳ ಹಿಂದೆಯಷ್ಟೇ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿತ್ತು. ಶೀಘ್ರದಲ್ಲಿಯೇ ಚುನಾವಣಾ ದಿನಾಂಕ ಘೋಷಣೆಯಾಗಲಿದ್ದು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು. ಈ ಬೆಳವಣಿಗೆಗಳನ್ನು ಗಮನಿಸಿದಲ್ಲಿ ನಾಳೆಯೇ ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.

2018ರಲ್ಲಿ ಮೇ 12ರಂದು ರಾಜ್ಯದಲ್ಲಿ ಚುನಾವಣೆ ನಡೆದಿತ್ತು. ಈ ಬಾರಿ ಕೂಡ ಮೇ 2ನೇ ವಾರದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. 2018ರ ಮೇ 15ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು.

- Advertisement -

Related news

error: Content is protected !!