Sunday, May 19, 2024
spot_imgspot_img
spot_imgspot_img

ನಾಳೆ ಸುಪ್ರೀಂ ಕೋರ್ಟ್ ನಿಂದ ಹಿಜಾಬ್ ತೀರ್ಪು ಪ್ರಕಟ

- Advertisement -G L Acharya panikkar
- Advertisement -

ನವದೆಹಲಿ: ಕರ್ನಾಟಕದ ಹಿಜಾಬ್ ವಿವಾದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30ಕ್ಕೆ ತೀರ್ಪು ನೀಡುವ ಸಾಧ್ಯತೆ ಇದೆ.

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರ ನ್ಯಾಯಪೀಠವು, ಸೆಪ್ಟೆಂಬರ್ 22ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಅಕ್ಟೋಬರ್ 16ರಂದು ನಿವೃತ್ತರಾಗಲಿರುವುದರಿಂದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ನಾಳೆ ತೀರ್ಪು ಹೊರಬೀಳುವ ನಿರೀಕ್ಷೆಯಿದೆ.

- Advertisement -

Related news

error: Content is protected !!