Wednesday, May 15, 2024
spot_imgspot_img
spot_imgspot_img

ನೀಟ್‌ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ಯುವತಿ ಆತ್ಮಹತ್ಯೆ

- Advertisement -G L Acharya panikkar
- Advertisement -

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಫೇಲ್ ಆಗುವ ಭೀತಿಯಿಂದ ತಮಿಳುನಾಡಿನ ತೆಂಕಶಿಯ ವೈದ್ಯಕೀಯ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಜಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ.

ನೀಟ್ ಪರೀಕ್ಷೆಯ ಫಲಿತಾಂಶದ ಭಯದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಆಕೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತೆಂಕಶಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎನ್‌ಸಿಆರ್‌ಬಿ ಅಂಕಿ ಅಂಶಗಳ ಪ್ರಕಾರ ಕಳೆದ ವರ್ಷ ದೇಶಾದ್ಯಂತ ದಾಖಲಾದ ಒಟ್ಟು ಆತ್ಮಹತ್ಯೆಗಳ ಸಂಖ್ಯೆಗೆ ತಮಿಳುನಾಡು ಶೇಕಡಾ 11.5 ರಷ್ಟು ಆತ್ಮಹತ್ಯೆ ದರವನ್ನು ಹೊಂದಿದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ರಾಜ್ಯ ಸರ್ಕಾರವು ಅನೇಕ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತಿದೆ. ಈ ಬಗ್ಗೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

- Advertisement -

Related news

error: Content is protected !!