Monday, June 15, 2026
spot_imgspot_img
spot_imgspot_img

ನೆಲ್ಯಾಡಿ: ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!!

- Advertisement -
- Advertisement -

ನೆಲ್ಯಾಡಿ: ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.

ಮಂಗಳೂರು ವಿವಿ ನೆಲ್ಯಾಡಿ ಘಟಕ ಕಾಲೇಜಿನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿನಿ ಗೋಳಿತ್ತೊಟ್ಟು ಗ್ರಾಮದ ಜನತಾ ಕಾಲೋನಿ ನಿವಾಸಿ ದಿ.ಸುಂದರ ಪೂಜಾರಿ ಹಾಗೂ ಲೀಲಾವತಿ ದಂಪತಿ ಪುತ್ರಿ ಮಮತಾ(18) ಮೃತ ದುರ್ದೈವಿ.

ಮಮತಾ ಅವರು ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಎ.25ರಂದು ಬೆಳಿಗ್ಗೆ, ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಮನೆಯವರು ನೆಲ್ಯಾಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿನ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ವರದಿಯಾಗಿದೆ.

ಮೃತ ಮಮತಾ ಅವರು ತಾಯಿ ಲೀಲಾವತಿ, ಸಹೋದರರಾದ ಬೇಬಿ ಪೂಜಾರಿ, ರವಿಪೂಜಾರಿ, ನಾಗೇಶ್ ಪೂಜಾರಿ ಅವರನ್ನು ಅಗಲಿದ್ದಾರೆ.

- Advertisement -

Related news

error: Content is protected !!