Monday, June 8, 2026
spot_imgspot_img
spot_imgspot_img

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ನಾಲ್ವರಿಗೆ ಗಾಯ

- Advertisement -
- Advertisement -

ನೆಲ್ಯಾಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಂದಕಕ್ಕೆ ಬಿದ್ದ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದಿದೆ.

ಕಟ್ಟೆಮಜಲು ನಿವಾಸಿ ರಜನೀಶ್ ಹಾಗೂ ಇತರ ಮೂವರು ಪ್ರಯಾಣಿಸುತ್ತಿದ್ದ ಕಾರು ಕಟ್ಟೆಮಜಲು ಸಮೀಪ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಘಟನೆಯಲ್ಲಿ ಚಾಲಕ ರಜನೀಶ್, ಕಾರಿನಲ್ಲಿದ್ದ ಪ್ರಯಾಣಿಕರಾದ ದಯಾನಂದ, ಚೇತನಾ ಹಾಗೂ ಭವಿತಾ ಎಂಬವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇವರೆಲ್ಲರೂ ನೆಲ್ಯಾಡಿಯಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

astr
- Advertisement -

Related news

error: Content is protected !!