Sunday, June 21, 2026
spot_imgspot_img
spot_imgspot_img

ನೇರಳಟ್ಟೆ: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -
vtv vitla

ವಿಟ್ಲ: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡಿದ್ದರು. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ ಆಕಸ್ಮಿಕವಾಗಿ ಬಂದು ರೈಲಿನಡಿಗೆ ಬಿದ್ದಿದ್ದರು. ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ, ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆ ತಂದಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನೆ ನಡೆದ ಸಂದರ್ಭ ರೈಲ್ವೇ ಪೈಲೆಟ್ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ನೀಡಿದ ಮಾಹಿತಿಯಂತೆ ಪುತ್ತೂರು ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಬಂದಿತ್ತಾದರೂ ವ್ಯಕ್ತಿ ಆಗಲೇ ಮೃತಪಟ್ಟಿದ್ದರಿಂದ ಮುಂದೆ ರೈಲ್ವೇ ಇಲಾಖೆಯ ಪೊಲೀಸ್ ಬಂದ ಬಳಿಕ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸುವ ನಿಟ್ಟಿನಲ್ಲಿ ರೈಲು ನಿಲ್ದಾಣದಲ್ಲಿ ಮೃತ ದೇಹವನ್ನು ಇರಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!