Friday, April 19, 2024
spot_imgspot_img
spot_imgspot_img

ಪಂಚರಾಜ್ಯ ತೀರ್ಪು: ಮಣಿಪುರದಲ್ಲಿ ಮೋಡಿ ಮಾಡಿದ ಬಿಜೆಪಿ

- Advertisement -G L Acharya panikkar
- Advertisement -

ಮಣಿಪುರ: ನಿರೀಕ್ಷೆಯಂತೆ ಮಣಿಪುರದಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಒಟ್ಟು 60 ಕ್ಷೇತ್ರಗಳಿರುವ ಮಣಿಪುರದಲ್ಲಿ ಬಿಜೆಪಿ 28 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಮತ್ತೆ ಅಧ್ಯಾಯ ಶುರುಮಾಡಿದೆ. ಕಾಂಗ್ರೆಸ್‌ 09, ಎನ್‌ಪಿಪಿ 10, ಇತರೆ 13ಸ್ಥಾನಗಳನ್ನು ಪಡೆದುಕೊಂಡಿದೆ.

ಮಣಿಪುರದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. 60 ಸ್ಥಾನಗಳ ವಿಧಾನಸಭೆಗೆ 265 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಪ್ರಸ್ತುತ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಆಡಳಿತ ನಡೆಸುತ್ತಿದೆ. ಆದಾಗ್ಯೂ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಬಾರಿ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಚುನಾವಣೋತ್ತರ ಸಮೀಕ್ಷೆಗಳು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಬಹುದು ಎಂದು ಭವಿಷ್ಯ ನುಡಿದಿದ್ದವು. ಇಂದು ನಿಜವಾಗಿದೆ.

- Advertisement -

Related news

error: Content is protected !!