- Advertisement -
- Advertisement -


ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಏಳು ಹಂತಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಈ 5 ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಇಲ್ಲಿ ನೀಡಲಾದ ಕೋವಿಡ್ ಲಸಿಕೆ ಪ್ರಮಾಣಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಇರುವುದಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭಾರತದ ಚುನಾವಣಾ ಆಯೋಗದ ಘೋಷಣೆಯ ಬಳಿಕ ಉ.ಪ್ರ ಹಾಗೂ ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆ ಪ್ರಧಾನಿಯವರ ಹೆಸರು ಹಾಗೂ ಭಾವಚಿತ್ರವನ್ನು ಲಸಿಕಾ ಪ್ರಮಾಣಪತ್ರದಿಂದ ಹೊರಗಿಡಲು ಶನಿವಾರ ರಾತ್ರಿಯೇ ಅಗತ್ಯ ಫಿಲ್ಟರ್ ಗಳನ್ನು ಅನ್ವಯಿಸಲಾಗಿದೆ ಎಂದು ವರದಿ ತಿಳಿಸಿದೆ.


- Advertisement -








