Monday, April 29, 2024
spot_imgspot_img
spot_imgspot_img

ಪಠ್ಯ ಪುಸ್ತಕದಿಂದ ತಮ್ಮ ಬರಹವನ್ನು ಕೈ ಬಿಡುವಂತೆ ಸಾಹಿತಿಗಳಿಂದ ಸರ್ಕಾರಕ್ಕೆ ಪತ್ರ

- Advertisement -G L Acharya panikkar
- Advertisement -

vtv vitla

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ನನ್ನ ಯಾವುದಾದರೂ ಬರಹವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲ’ ಎಂದು ಸಾಹಿತಿ ಜಿ. ರಾಮಕೃಷ್ಣ ತಿಳಿಸಿದ್ದಾರೆ.

ಶಿಕ್ಷಣವನ್ನು ಕೆಟ್ಟ ರಾಜಕೀಯಕ್ಕೆ ಗುರಿ ಮಾಡಲಾಗುತ್ತಿರುವುದು ಸರ್ವಥಾ ಕ್ಷಮಾರ್ಹವಲ್ಲ. ನನ್ನ ಬರಹವನ್ನು ಪಠ್ಯ ಪುಸ್ತಕದ ಪರಿಧಿಯಿಂದ ಹೊರಗಿಡುವುದು ಸೂಕ್ತವೆಂದು ಭಾವಿಸಿದ್ದೇನೆ. ನಮ್ಮ ರಾಜ್ಯದ ಶಾಲೆಗಳ ಪಠ್ಯಪುಸ್ತಕಗಳ ತಥಾಕಥಿತ ಪರಿಷ್ಕರಣೆಯು ತೀರಾ ಅಪಮಾರ್ಗದಲ್ಲಿ ಸಾಗುತ್ತಿರುವುದು ಜಗಜ್ಜಾಹೀರಾಗಿದೆ. ಅದು ಕೇವಲ ಅಬದ್ಧ ಮತ್ತು ಅವೈಚಾರಿಕ ಪ್ರಕ್ರಿಯೆಯಾಗಿ ಉಳಿದಿಲ್ಲ. ಮಕ್ಕಳಿಗೆ ವಿಷ ಉಣಿಸುವುದು ಬೌದ್ಧಿಕ ಕ್ಷೇತ್ರದಲ್ಲಿ ದುರಂತ’ ಎಂದು ಎಂದು ಸಾಹಿತಿ ಜಿ.ರಾಮಕೃಷ್ಣ ತಿಳಿಸಿದ್ದಾರೆ.

ಇದೇ ವೇಳೆ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಸಹ ಸರಕಾರಕ್ಕೆ ದೀರ್ಘ ಪತ್ರ ಬರೆದು ತಮ್ಮ ಪಠ್ಯ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ದೇವನೂರು ಮಹಾದೇವ, ಈ ಹಿಂದಿನ ಪಠ್ಯದಲ್ಲಿ ಎಲ್.ಬಸವರಾಜು, ಎ.ಎನ್.ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ ಕತೆ, ಲೇಖನಗಳನ್ನು ಕೈಬಿಟ್ಟವರಿಗೆ ಕನ್ನ ಡ ನಾಡು, ನುಡಿ, ಸಂಸ್ಕೃತಿ ಕುರಿತು ಏನೇನೂ ತಿಳಿದಿಲ್ಲ ಎಂದೇ ಅರ್ಥ ಎಂದು ಖಂಡಿಸಿದ್ದಾರೆ.

- Advertisement -

Related news

error: Content is protected !!