Sunday, May 5, 2024
spot_imgspot_img
spot_imgspot_img

ಪುತ್ತೂರು: ಒಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಪ್ರಕರಣದ ಮೂವರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಪುತ್ತೂರು: ಒಂಟಿ ಮಹಿಳೆ ಕಮಲ ಎಂಬವರ ಮನೆಗೆ ಮೂವರು ದುಷ್ಕರ್ಮಿಗಳು ನುಗ್ಗಿ ಅವರ ಕುತ್ತಿಗೆ ಅದುಮಿ ಹಿಡಿದು ತಲವಾರು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು 2 ಚಿನ್ನದ ಬಳೆಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 62 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್, 1 ತಲವಾರು, 2 ಮಂಕಿಕ್ಯಾಪ್ ಇತ್ಯಾದಿ ಸೇರಿ ಒಟ್ಟು 4.5 ಲಕ್ಷ ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ಮೂಡಬಿದ್ರೆಯ ಬಡಗಮಿಜಾರ್ ಗ್ರಾಮದ ಅಶ್ವತ್ಥಪುರ ಬೆರಿಂಜೆಗುಡ್ಡೆಯ ದಿನೇಶ್ ಪೂಜಾರಿ (36ವ), ಮೂಲತಃ ಬೆಳ್ತಂಗಡಿ ಮರೋಡಿಯ ಉಳಗಡ್ಡೆ ಹೊಸಮನೆಯ ನಿವಾಸಿಯಾಗಿದ್ದು ಪ್ರಸ್ತುತ ಮೂಡಬಿದ್ರೆಯ ಕಲ್ಲಗುಡ್ಡೆಯಲ್ಲಿ ವಾಸವಾಗಿರುವ ಸುಕೇಶ್ ಪೂಜಾರಿ (32ವ) ಮತ್ತು ಮೂಡಬಿದ್ರೆ ಮೂಡುಮಾರ್ನಾಡು ನಿವಾಸಿ ಹರೀಶ್ ಪೂಜಾರಿ (34ವ) ಎಂದು ಗುರುತಿಸಲಾಗಿದೆ.

ಈ ಪ್ರಕರಣದ ಪತ್ತೆಗೆ ಸಿಸಿಬಿ ಘಟಕದ ವಿಶೇಷ ತಂಡ ರಚನೆ ಮಾಡಲಾಗಿತ್ತು. ಮಂಗಳೂರು ಸಿಸಿಬಿ ಘಟಕದಲ್ಲಿ ಪ್ರಸ್ತುತ ಪೊಲೀಸ್ ನಿರೀಕ್ಷಕರಾಗಿರುವ ಈ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿದ್ದ ಪುತ್ತೂರು ಮೂಲದ ಮಹೇಶ್ ಪ್ರಸಾದ್ ಮತ್ತು ಸಿಸಿಬಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆರೋಪಿಗಳ ಪತ್ತೆ ಕಾರ್ಯ ನಡೆಸಿದ್ದರು.

ಘಟನೆಯ ವಿವರ:

ಮೂಡಬಿದ್ರೆಯ ಅಶ್ವಥಪುರದ ಬೇರಿಂಜೆಗುಡ್ಡೆ ಎಂಬಲ್ಲಿ ಒಂಟಿಯಾಗಿ ವಾಸವಿರುವ ಕಮಲರವರ ಮನೆಗೆ ದಿನಾಂಕ 30-8-2022ರಂದು ರಾತ್ರಿ 10- 30 ಗಂಟೆಗೆ ಮಂಕಿಕ್ಯಾಪ್ ಹಾಕಿ ಕೈಗೆ ಗ್ಲೌಸ್ ಹಾಕಿ ಕೈಯಲ್ಲಿ ತಲವಾರು ಹಿಡಿದುಕೊಂಡು ಬಂದು ಕಮಲರವರ ಕುತ್ತಿಗೆ ಅದುಮಿ ತಲವಾರಿನ ಹಿಡಿಯಿಂದ ಗುದ್ದಿ ಹಲ್ಲೆ ನಡೆಸಿ ಕಮಲರವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು ಚಿನ್ನದ 2 ಬಳೆಗಳನ್ನು ಸುಲಿಗೆ ಮಾಡಿದ್ದ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣವು ಗಂಭೀರ ಪ್ರಕರಣವಾದ್ದರಿಂದ ಈ ಪ್ರಕರಣದ ಪತ್ತೆಗೆ ಸಿಸಿಬಿ ಘಟಕದ ವಿಶೇಷ ತಂಡ ರಚನೆ ಮಾಡಲಾಗಿತ್ತು. ಸಿಸಿಬಿ ಘಟಕದ ವಿಶೇಷ ತಂಡದವರು ಆರೋಪಿಗಲ ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ಬಲೆ ಬೀಸಿದರು. ಸುಲಿಗೆ ಮಾಡಿದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಮಂಗಳೂರಿಗೆ ಬರುತ್ತಿದ್ದಾರೆಂದು ಮಾಹಿತಿ ಪಡೆದ ಸಿಸಿಬಿ ಪೊಲೀಸರು, 3 ಜನ ಆರೋಪಿಗಳನ್ನು ಕುಲಶೇಖರ ಚರ್ಚ್ ಗೇಟ್ ಬಳಿ ದಸ್ತಗಿರಿ ಮಾಡಿ ಅವರಿಂದ ಸುಲಿಗೆ ಮಾಡಿದ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್, 1 ತಲವಾರು, 2 ಮಂಕಿಕ್ಯಾಪ್ ಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ದಿನೇಶ್ ಪೂಜಾರಿ, ಸುಕೇಶ್ ಪೂಜಾರಿ ಮತ್ತು ಹರೀಶ್ ಪೂಜಾರಿ ವಿರುದ್ಧ ಈ ಹಿಂದೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳವು ಪ್ರಕರಣ ದಾಖಲಾಗಿದ್ದು, 3 ಜನ ಕೂಡ ಸದ್ರಿ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಆರೋಪಿಗಳ ಪೈಕಿ ಸುಕೇಶ್ ಪೂಜಾರಿ ಎಂಬಾತನ ವಿರುದ್ಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ 307 ಐಪಿಸಿಯಂತೆ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!